ಶಿವಮೊಗ್ಗ: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಸಮೀಪದ ಸಕ್ರೆಬೈಲು ಆನೆ ಬಿಡಾರಕ್ಕೆ ಮೇ 21ರಿಂದ ಜಾರಿಗೆ ಬರುವಂತೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಈಚೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರ್ಘಟನೆಯ ಹಿನ್ನೆಲೆಯಲ್ಲಿ, ಈ ಬಿಡಾರದಲ್ಲೂ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರ ನಿರ್ದೇಶನದ ಮೇರೆಗೆ, ಬಿಡಾರದಲ್ಲಿ ಹೊಸ ಸುರಕ್ಷತಾ ನಿಯಮಾವಳಿಗಳು ಸಿದ್ಧವಾಗುವವರೆಗೆ ಸಕ್ರೆಬೈಲು ಆನೆ ಬಿಡಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.