ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ರೈಲು ನಿಲ್ದಾಣದ ಬಳಿ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ಉಪ್ಪು: ಎಸ್ಪಿ

Published 6 ನವೆಂಬರ್ 2023, 3:17 IST
Last Updated 6 ನವೆಂಬರ್ 2023, 3:17 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದ ಸಮೀಪ ಅನುಮಾನಾಸ್ಪದವಾಗಿ ಇಟ್ಟಿದ್ದ ಎರಡು ಕಬ್ಬಿಣದ ಬಾಕ್ಸ್‌ಗಳಲ್ಲಿ ಇಡಲಾಗಿದ್ದ ಬಿಳಿ ಬಣ್ಣದ ಪುಡಿ ಉಪ್ಪು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಬಾಕ್ಸ್ ಇಟ್ಟಿದ್ದ ಆರೋಪಿಗಳ ಪ್ರಾಥಮಿಕ ವಿಚಾರಣೆಯಲ್ಲಿ ಈ ಸಂಗತಿ ತಿಳಿದುಬಂದಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಿಂದ ಭಾನುವಾರ ರಾತ್ರಿ ಬಾಂಬ್ ವಿಲೇವಾರಿ ತಂಡ ಬಂದಿದ್ದು, ಸೋಮವಾರ ಬೆಳಗಿನ ಜಾವ 4 ಗಂಟೆ ವೇಳೆಗೆ ಬಾಕ್ದ್‌ಗಳ ಬೀಗ ಸ್ಫೋಟಿಸಿ ಅದನ್ನು ತೆಗೆದಾಗ ಕೆಲವು ನಿರುಪಯುಕ್ತ ವಸ್ತುಗಳು ಹಾಗೂ ಬಿಳಿ ಪುಡಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT