ಭಾನುವಾರ, ಮೇ 29, 2022
21 °C

‘ಮರಳು ಸಾಗಣೆ: ಶಾಸಕರಿಗೆ ಒಂದು ರೂಪಾಯಿಯೂ ಕೊಟ್ಟಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸನಗರ: ‘ಮರಳು ಸಾಗಣೆ ಕುರಿತು ಶಾಸಕ ಎಚ್‌. ಹಾಲಪ್ಪ ಹರತಾಳು ಒಂದು ರೂಪಾಯಿಯನ್ನೂ ಮುಟ್ಟಿಲ್ಲ. ಈ ವಿಚಾರದಲ್ಲಿ ಯಾವ ದೇವಸ್ಥಾನಕ್ಕೆ ಬಂದು ಆಣೆ ಪ್ರಮಾಣ ಮಾಡಲು ನಾವು ಸಿದ್ಧ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆಲುವಳ್ಳಿ ವೀರೇಶ್ ಹೇಳಿದರು.

‘ತಾಲ್ಲೂಕಿನಲ್ಲಿ ಶರಾವತಿ ನದಿ ದಂಡೆ ಮತ್ತು ಹಳ್ಳಕೊಳ್ಳಗಳಲ್ಲಿ ಮರಳು ಸಾಗಣೆ ನಡೆಯುತ್ತಿದೆ. ಲಾರಿ ಮಾಲೀಕರು ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಸೇರಿ ಮರಳು ಸಾಗಣೆ ವಹಿವಾಟು ನಡೆಸುತ್ತಿದ್ದಾರೆ. ಇದರಲ್ಲಿ ಶಾಸಕ ಹಾಲಪ್ಪ ಅವರ ಪಾತ್ರವೇನೂ ಇಲ್ಲ. ಮರಳು ಸಾಗಣೆಗೆ ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಒತ್ತಡ ತಂದಿದ್ದಾರೆ ಅಷ್ಟೆ. ಆದರೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮರಳು ಗಣಿಗಾರಿಕೆಯಲ್ಲಿ ಶಾಸಕ ಹಾಲಪ್ಪ ಅವರ ಪಾತ್ರವಿದೆ. ಅವರು ಮರಳು ಸಾಗಾಣಿಕೆದಾರರಿಂದ ಹಫ್ತಾ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದಲ್ಲಿ ಹುರುಳಿಲ್ಲ. ಶಾಸಕರು ಮರಳು ಸಾಗಣೆದಾರರಿಂದ ಒಂದು ಪೈಸೆಯನ್ನೂ ಮುಟ್ಟಿಲ್ಲ. ನಾವೂ ಕೊಟ್ಟಿಲ್ಲ. ಬೇಕಿದ್ದರೆ ಸಿಗಂದೂರು ದೇವಸ್ಥಾನಕ್ಕೆ ಬರಲಿ. ಅಲ್ಲಿ ಶಾಸಕರ ಪರವಾಗಿ ನಾವು ಆಣೆ ಪ್ರಮಾಣ ಮಾಡುತ್ತೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

‘ಬೇಳೂರು ಗೋಪಾಲಕೃಷ್ಣ ಅವರು ಶಾಸಕರ ಮೇಲೆ ಸುಮ್ಮನೆ ಆರೋಪ ಮಾಡುತ್ತ ಮರಳುಗಾರಿಕೆಗೆ ಅಡ್ಡಿಯಾಗಿದ್ದಾರೆ. ಅವರು ಶಾಸಕರಾಗಿದ್ದಾಗ ಮರಳು ವಿಚಾರದಲ್ಲಿ ಏನೆಲ್ಲ ಮಾಡಿದರು ಎಂಬುದು ಜನರಿಗೆ ಗೊತ್ತಿದೆ’ ಎಂದು ಟೀಕಿಸಿದರು.

ಆನಂದ ಮೆಣಸೆ, ‘ಬೇಳೂರು ಗೋಪಾಲಕೃಷ್ಣ ಅವಧಿಯಲ್ಲಿ ಮರಳು ಸಾಗಣೆ ಯಾವ ಸ್ಥಿತಿ ಇತ್ತು ಎನ್ನುವುದು ತಿಳಿದಿದೆ’ ಎಂದರು.

ಗಿರೀಶ್, ಅಶೋಕ್ ಸಂಪಳ್ಳಿ, ರಾಜೇಶ ಜೈನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು