ಶನಿವಾರ, ಮಾರ್ಚ್ 25, 2023
28 °C

ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಹಬ್ಬ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಹಬ್ಬದ ಪ್ರತ್ಯೇಕ ಸ್ಪರ್ಧೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಕೊನೆಗವಳ್ಳಿ ಗ್ರಾಮದಲ್ಲಿ, ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಎದೆಗೆ ಹೋರಿ ತಿವಿದಿದ್ದರಿಂದ ಸಾವನ್ನಪ್ಪಿದ್ದಾರೆ. ಇದೇ ವೇಳೆ ಆರು ಜನ ಗಾಯಗೊಂಡರು.

ಕುಸಿದುಬಿದ್ದು ಸಾವು: ಸೊರಬ ತಾಲ್ಲೂಕಿನ ಕುಪ್ಪಗಡ್ಡೆಯಲ್ಲಿ ಹೋರಿ ಬೆದರಿಸುವ ಹಬ್ಬದಲ್ಲಿ ಪಾಲ್ಗೊಂಡಿದ್ದ ತೆವರೆತೆಪ್ಪ ಗ್ರಾಮದ ಯುವಕ ಹರೀಶ್ (22) ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕುಪ್ಪಗಡ್ಡೆಗೆ ಸ್ನೇಹಿತರೊಂದಿಗೆ ಬಂದಿದ್ದ ಹರೀಶ್, ಮಧ್ಯಾಹ್ನ ಸುಡು‌ಬಿಸಿಲು ತಾಳಲಾರದೆ ನಿತ್ರಾಣಗೊಂಡು ಕುಸಿದುಬಿದ್ದಿದ್ದಾರೆ. ಕೂಡಲೇ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆತಂದಿದ್ದು, ಆ ವೇಳೆಗೆ ಹರೀಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು