ಶನಿವಾರ, ಜುಲೈ 31, 2021
28 °C

ಶಿವಮೊಗ್ಗ | ಸರಸ್ವತಿ ಸ್ವಾಮೀಜಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕಲ್ಲು ಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕಾನಂದ ಸರಸ್ವತಿ ಸ್ವಾಮೀಜಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

52 ವರ್ಷದ ಸ್ವಾಮೀಜಿ ಕೋವಿಡ್ ರೋಗಿಯಾಗಿ ಇಲ್ಲಿನ ಮೆಗ್ಗಾನ್ ಅಸ್ಪತ್ರೆಗೆ ದಾಖಲಾದ ನಂತರ ಆಯುರ್ವೇದ ಚಿಕಿತ್ಸೆ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದಿದ್ದರು. ಅವರ ಕೋರಿಕೆಯಂತೆ ಆಯುಷ್ ವೈದ್ಯರು ಜೀವರಕ್ಷಕ ಔಷಧ ನೀಡಿದ್ದರು.

‘ಆಯುರ್ವೆದ ಚಿಕಿತ್ಸೆಯ ಫಲವಾಗಿಯೇ ಕೊರೊನಾ ಸೋಂಕಿನಿಂದ ಬೇಗನೆ ಗುಣಮುಖನಾಗಿದ್ದೇನೆ’ ಎಂದು ಸ್ವಾಮೀಜಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.