ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಶಿಕ್ಷಣಕ್ಕೆ ಮುನ್ನುಡಿ ಬರೆದ ಸಾವಿತ್ರಿಬಾಯಿ: ಡಾ.ಲತಾ

Last Updated 10 ಅಕ್ಟೋಬರ್ 2021, 6:18 IST
ಅಕ್ಷರ ಗಾತ್ರ

ಸೊರಬ: ‘ಸಮಾಜದಲ್ಲಿ ಸ್ತ್ರೀ, ಪುರುಷರಿಗೆ ಸಮಾನವಾಗಿ ಶಿಕ್ಷಣ ನೀಡಲು ಧರ್ಮ ಅಡ್ಡಿಯಾದ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರಿಗೆ ಶಿಕ್ಷಣ ನೀಡಿ ಸ್ವಾಭಿಮಾನದ ಬದುಕಿಗೆ ಮುನ್ನುಡಿ ಬರೆದಿದ್ದಾರೆ’ ಎಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಡಾ.ಲತಾ ಎಸ್. ಮುಳ್ಳೂರ ಹೇಳಿದರು.

ಪಟ್ಟಣದ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘ, ರಾಜ್ಯ ಘಟಕ ಧಾರವಾಡ, ತಾಲ್ಲೂಕು ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ತಾಲ್ಲೂಕು ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಶೈಕ್ಷಣಿಕ, ಸಾಮಾಜಿಕ ಸಂಘಟನೆ ಜತೆಗೆ ನಮ್ಮ ಹಕ್ಕು, ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ನಮ್ಮ ಸಂಘಟನೆಯನ್ನು ಕಟ್ಟಿಕೊಂಡಿದ್ದೇವೆ. ಪುರುಷರಿಗೆ ವಿರುದ್ಧವಾಗಿ ಅಥವಾ ಯಾವುದೇ ಸಂಘಟನೆಗೆ ವಿರುದ್ಧವಾಗಿ ಅಲ್ಲ’ ಎಂದರು.

ಮಹಿಳಾ ಸಾಧಕಿಯರ ಜಯಂತಿ ಆಚರಣೆಗೆ ಸರ್ಕಾರ ಒತ್ತು ನೀಡಬೇಕು. ಪ್ರತಿಭಾನ್ವಿತ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಆರಂಭಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕ ಡಾ.ಹರಿಪ್ರಸಾದ್, ಹೊಸ ಶಿಕ್ಷಣ ನೀತಿ ಬಗ್ಗೆ ಉಪನ್ಯಾಸ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ನಂಜರಾಜ್ ಉದ್ಘಾಟಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಶಿವಾನಂದಪ್ಪ, ಡಾ.ಎಚ್.ಈ. ಜ್ಞಾನೇಶ್ ಮಾತನಾಡಿದರು. ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲ್ಲೂಕು ಅಧ್ಯಕ್ಷೆ ಶಶಿಕಲಾ ಅಧ್ಯಕ್ಷತೆ ವಹಿಸಿದ್ದರು. ಸಂಘದ ಜಿಲ್ಲಾ ಸಮಿತಿ ಸದಸ್ಯೆ ಸುಧಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಘಟನಾ ಗೌರವ ಅಧ್ಯಕ್ಷೆ ಎಸ್.ರತ್ನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಎಚ್. ಶಕುಂತಲಾ ಸ್ವಾಗತಿಸಿದರು. ಜಿಲ್ಲಾ ಸಮಿತಿ ಸದಸ್ಯೆ ಯಶೋಧಾ ನಿರೂಪಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರಾಧಾ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ನರೇಗೌಡರ್, ತಾಲ್ಲೂಕು ಕೋಶಾಧ್ಯಕ್ಷೆ ಜೋಷಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ್ ಒಡೆಯರ್, ಚಿಂತಕ ರಾಜಪ್ಪ ಮಾಸ್ತರ್, ನಾಗೇಂದ್ರಪ್ಪ, ಶಿವಾನಂದಪ್ಪ, ಮಂಜಪ್ಪ ಹುಲ್ತಿಕೊಪ್ಪ, ಎಂ.ಆರ್. ಶಿವಪ್ಪ, ಬಸವರಾಜಪ್ಪ, ಚಂದ್ರಪ್ಪ, ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT