ಶಿವಮೊಗ್ಗ: ಪರಿಶಿಷ್ಟರಿಗೆ 2019–20ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಿರುವ ಧೋರಣೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಆಯಾ ಜಾತಿಗೆ ಅನುಗುಣವಾಗಿ ನಿಗಮ ಮಂಡಳಿ ಸ್ಥಾಪಿಸಿದೆ. ಬಜೆಟ್‌ನಲ್ಲಿ ಹಣ ಇಟ್ಟಿದೆ. ಶಿವಮೊಗ್ಗದಲ್ಲಿ ಎಸ್‌ಸಿಪಿ ಟಿಎಸ್‌ಪಿಯ ಹಣವನ್ನು ವಿದ್ಯಾನಗರದ ಪ್ರಿಯಾಂಕಾ ಬಡಾವಣೆಯ ಖಾಸಗಿ ಲೇಔಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿದರು.
ದಲಿತರಿಗೆ ಮೀಸಲಾಗಿಟ್ಟಿದ್ದ ಹಣ ಬೇರೆ ಕಾರ್ಯಕ್ಕೆ ಬಳಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಹೆಚ್. ಹಾಲೇಶಪ್ಪ, ಶಿವಕುಮಾರ್, ಜಗ್ಗು, ಪರಮೇಶ್ ಸೂಗೂರು, ಕೃಷ್ಣಪ್ಪ, ಆನಂದ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.