ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕೀಟನಾಶಕ ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ನೀಡಿದ ದೂರನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಠಾಣೆ ಪೊಲೀಸರು, ಶುಕ್ರವಾರ ಶಾಲೆಗೆ ತೆರಳಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಪ್ರಯೋಗಾಲಯಕ್ಕೆ ನೀರಿನ ಮಾದರಿ:

‘ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇವೆ. ಅದರಲ್ಲಿ ಅಡುಗೆ ಮನೆಗೆ ನೇರ ಸಂಪರ್ಕ ಇರುವ ಟ್ಯಾಂಕ್ನಲ್ಲಿನ ನೀರಿನಲ್ಲಿ ಗುರುವಾರ ಕೀಟನಾಶಕದ ವಾಸನೆ ಬಂದಿತ್ತು. ಆರೋಗ್ಯ ಇಲಾಖೆ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದೆ’ ಎಂದು ಡಿಡಿಪಿಐ ಎಸ್.ಆರ್.ಮಂಜುನಾಥ್ ತಿಳಿಸಿದರು.

‘ಮತ್ತೊಂದು ಟ್ಯಾಂಕ್ ಶಾಲೆಯ ಕೈತೋಟಕ್ಕೆ ಸಂಪರ್ಕ ಹೊಂದಿದೆ. ನೀರು ಕುಡಿದಿದ್ದ 18 ವಿದ್ಯಾರ್ಥಿಗಳನ್ನು ಹೊಸನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸಂಜೆಯವರೆಗೂ ಎಲ್ಲರನ್ನೂ ನಿಗಾದಲ್ಲಿ ಇಡಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾಗಿ ಅವರು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಶಾಲೆಗೆ ಎರಡು ದಿನ ರಜೆ ಕೊಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.