ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮಕ್ಕಳ ಸ್ವಾಗತಕ್ಕೆ ಸಜ್ಜಾಗಿರುವ ಶಾಲೆ

ಇಂದಿನಿಂದ ಶಾಲೆ ಆರಂಭ; ಸಿಬ್ಬಂದಿಯಿಂದ ಸ್ವಚ್ಛತಾ ಕೆಲಸ
Last Updated 16 ಮೇ 2022, 3:12 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್‌ನಿಂದಾಗಿ ಎರಡು ವರ್ಷದಲ್ಲಿಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾದ ಕಾರಣ ಈ ಬಾರಿ ಬೇಸಿಗೆ ರಜೆ ಕಡಿತಗೊಳಿಸಿ ಮೇ 16ರಿಂದಲೇ ಪ್ರಾರಂಭಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳು ಸಹ ಶಾಲೆಗೆ ತೆರಳಲುಸಜ್ಜುಗೊಂಡಿದ್ದಾರೆ.

ಕೆಲ ಕಡೆ ಶಿಥಿಲಗೊಂಡ ಕೊಠಡಿಗಳು, ಮಳೆ ಬಂದರೆ ಸೋರುವ ಕಟ್ಟಡಗಳದುರಸ್ತಿ ಕಾರ್ಯ ಅನುದಾನ ಕೊರತೆಯಿಂದ ಪೂರ್ಣವಾಗಿ ಮುಗಿದಿಲ್ಲ. ಶಾಲಾವರಣಹಾಗೂ ಕೊಠಡಿ, ಶೌಚಾಲಯ ಸ್ವಚ್ಛತೆಗೆ ಕ್ರಮ ವಹಿಸುವಂತೆ ಎಲ್ಲಾ ಶಾಲೆಗಳಮುಖ್ಯಶಿಕ್ಷಕರಿಗೆ ಇಲಾಖೆ ಮಾರ್ಗದರ್ಶನ ನೀಡಿದೆ.

ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳ ಕಾರ್ಯಕ್ರಮಕುರಿತು ರೂಪುರೇಷೆ ಸಿದ್ಧಪಡಿಸಲಾಗಿದೆ. ಶಿಕ್ಷಕರಿಗೆ ಕೈಪಿಡಿ, ವಿಶೇಷ ತರಬೇತಿನೀಡಲಾಗಿದೆ.

‘ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಶಿಕ್ಷಣ ಇಲಾಖೆ ಈಗಾಗಲೇ ಅನುಮತಿ ನೀಡಿದೆ.ಶಿಕ್ಷಕರಿಗೆ ತರಬೇತಿ ಕೊಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಕಡೆಪೋಷಕರ ಮನವೊಲಿಸಿ, ಶಾಲೆಯನ್ನು ಉಳಿಸುವ ಪ್ರಯತ್ನ ಮಾಡಲಾಗುವುದು’ ಎನ್ನುತ್ತಾರೆ ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ.

‘ಶಾಲಾಭಿವೃದ್ದಿ ಸಮಿತಿ ಮತ್ತು ಮುಖ್ಯಶಿಕ್ಷಕರ ಸಭೆ ನಡೆಸಿ ಸಲಹೆ, ಸೂಚನೆನೀಡಲಾಗಿದೆ. ಗ್ರಾಮ ಪಂಚಾಯಿತಿ ಸಹಕಾರದಿಂದ ಶಾಲಾ ಕೊಠಡಿಗಳಿಗೆ ಸುಣ್ಣ, ಬಣ್ಣ ಮಾಡಿಸಲಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ಸಂಭ್ರಮದ ಸ್ವಾಗತ: ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಸಂಪೂರ್ಣ ಸಿದ್ಧತೆ ನಡೆಸುವಂತೆ ಶಿಕ್ಷಕರಿಗೆ ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಇಲಾಖೆ ಸೂಚಿಸಿದೆ. ಶಾಲೆಗಳನ್ನು ತೋರಣಗಳಿಂದ ಸಿಂಗರಿಸುವಂತೆ ಮತ್ತು ಮಕ್ಕಳನ್ನು ಅತಿಥಿಗಳಂತೆ ಸ್ವಾಗತಿಸಲು ಸೂಚನೆ ನೀಡಲಾಗಿದೆ.

ಮೊದಲ ದಿನ ಸಿಹಿ ಸಹಿತ ಊಟ ಬಡಿಸುವಂತೆ ಬಿಸಿಯೂಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆಯೇ ಶಾಲೆಗಳಿಗೆ ಹಂಚಿಕೆಯಾದ ಅತಿಥಿ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿ ನೀಡಿ ತರಗತಿಗೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಂತದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ವಿಭಾಗ ಮಟ್ಟದಲ್ಲಿ ಶೇ 80ರಷ್ಟು ಶಿಕ್ಷಕರಿಗೆ ಕಲಿಕಾ ಚೇತರಿಕೆ ಮತ್ತು ವಿದ್ಯಾ ಪ್ರವೇಶ ತರಬೇತಿ ನೀಡಲಾಗಿದೆ’ ಎಂದು ಡಿಡಿಪಿಐ ತಿಳಿಸಿದರು.

‘ವರ್ಗಾವಣೆ ಮತ್ತು ನಿವೃತ್ತಿಯಿಂದ ತೆರವಾಗಿರುವ ಹಾಗೂ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನಿಯೋಜಿಸಲೂ ಸೂಚಿಸಲಾಗಿದೆ. ಪುಸ್ತಕ ಹಂಚಿಕೆ ಮಾಡಲು ಕ್ರಮಕೈಗೊಳ್ಳಲುಬ್ಲಾಕ್ ಮತ್ತು ಜಿಲ್ಲಾ ಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಎಲ್ಲಾ ಮಕ್ಕಳಿಗೆ ಪುಸ್ತಕ ದೊರೆಯುವಂತೆ ಪುಸ್ತಕ ಬ್ಯಾಂಕ್ ಹಾಗೂ ಹೊಸ ಪಠ್ಯಪುಸ್ತಕಗಳು ಸೇರಿ ಎಲ್ಲ ಪುಸ್ತಕಗಳು ದೊರೆಯುವಂತೆಕ್ರಮ ಕೈಗೊಳ್ಳಲಾಗಿದೆ. ವಿಭಾಗದ ಹಿರಿಯ ಅಧಿಕಾರಿಗಳು ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ಅನುಷ್ಠಾನ ಕುರಿತು ಪರಿಶೀಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕೊಠಡಿ, ಶಿಕ್ಷಕರದ್ದೇ ಸಮಸ್ಯೆ
ಜಿಲ್ಲೆಯಲ್ಲಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಜಿಲ್ಲೆಯಲ್ಲಿ 1,841 ಸರ್ಕಾರಿ ಶಾಲೆಗಳಿವೆ. ಒಟ್ಟು ಶಾಲೆಗಳಲ್ಲಿ 8,773 ಕೊಠಡಿಗಳಿವೆ. ಒಟ್ಟು 6,454 ಕೊಠಡಿಗಳು ಉತ್ತಮ ಸ್ಥಿತಿಯಲ್ಲಿವೆ. 1,161 ಕೊಠಡಿಗಳು ಭಾಗಶಃ ದುರಸ್ತಿಯ ಅಗತ್ಯವಿದೆ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು.

ಜಿಲ್ಲೆಯಲ್ಲಿ 901 ಶಿಕ್ಷಕರ ಹುದ್ದೆಗಳು ಖಾಲಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. 901 ಹುದ್ದೆಗಳು ಖಾಲಿ ಉಳಿದಿವೆ. ಪ್ರಾಥಮಿಕ ಶಾಲೆಗಳ 6,383 ಹುದ್ದೆಗಳಲ್ಲಿ 5,482 ಶಿಕ್ಷಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 901 ಹುದ್ದೆಗಳು ಖಾಲಿ ಇವೆ. ಇದರಲ್ಲಿ 126 ಮುಖ್ಯಶಿಕ್ಷಕರು, 768 ಸಹ ಶಿಕ್ಷಕರು, 7 ವಿಶೇಷ ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT