ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮರಿ, ಸಾಗರ ಶಾಲೆಗಳ ಸಮಸ್ಯೆ ಬಗೆಹರಿಸಲು ಎಸ್‌ಡಿಪಿಐ ಆಗ್ರಹ

Last Updated 12 ನವೆಂಬರ್ 2021, 12:28 IST
ಅಕ್ಷರ ಗಾತ್ರ

ಶಿವಮೊಗ್ಗ: ತುಮರಿ ಶಾಲೆ ಜಾಗ ಖಾಸಗಿ ವ್ಯಕ್ತಿಗೆ ಪರಭಾರೆ ಮಾಡಿರುವ, ಮೌಲಾನ ಆಜಾದ್ ಮಾದರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಾಗರ ತಾಲ್ಲೂಕಿನ ತುಮರಿ ಸರ್ವೇ ನಂಬರ್ 24ರಲ್ಲಿರುವ 1918ರಿಂದ ಶಾಲೆ ನಡೆಯುತ್ತಿದೆ. 2020 ಏಪ್ರಿಲ್‌ನಲ್ಲಿ ತಹಶೀಲ್ದಾರ್ ಅವರುಖಾಸಗಿ ವ್ಯಕ್ತಿ ಹೆಸರಿಗೆ ಶಾಲೆಯ 8 ಎಕರೆ ಜಾಗ ಖಾತೆ ಮಾಡಿಕೊಟ್ಟಿದ್ದಾರೆ. ಆದರೆ, ಶಾಲೆಗೆ ಸೇರಿದ ಜಾಗವನ್ನು ಯಾವುದೆ ಪರಿಶೀಲನೆ ನಡೆಸದೆ, ತನಿಖೆ ಮಾಡದೇ ಖಾತೆ ಮಾಡಿಕೊಟ್ಟಿದ್ದಾರೆ ಎಂದು ದೂರಿದರು.

ಸಾಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ 6ರಿಂದ 9ನೇ ತರಗತಿಗೆ 50 ಮಕ್ಕಳು ದಾಖಲಾಗಿದ್ದಾರೆ. ಈ ಶಾಲೆ ಕಟ್ಟಡ ಶಿಥಿಲಗೊಂಡ ಕಾರಣ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ 4 ಹೆಚ್ಚುವರಿ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ₹ 50 ಲಕ್ಷ ಬಿಡುಗಡೆ ಮಾಡಿದೆ. ಖಾಸಗಿ ಶಾಲೆಗಳ ಮಾಫಿಯಾಕ್ಕೆ ಮಣಿದು ಕಟ್ಟಡ ನಿರ್ಮಾಣ ಮಾಡುತ್ತಿಲ್ಲ. ಉಪ ವಿಭಾಗಾಧಿಕಾರಿಗಳು, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಕ್ರಮಕೈಗೊಂಡಿರುವುದಿಲ್ಲ ಎಂದು ದೂರಿದರು.

ತಕ್ಷಣ ಸರ್ಕಾರಿ ಶಾಲೆ ಜಾಗ ಒತ್ತುವರಿ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು. ತುಮರಿ ಶಾಲೆ ಜಾಗ ಪರಭಾರೆ ಮಾಡಿದ ತಹಶೀಲ್ಡಾರ್ ಅವರನ್ನು ಅಮಾನತು ಮಾಡಬೇಕು. ಸಾಗರದ ಈದ್ಗಾ ಮೊಹಲ್ಲಾ ಮೌಲಾನ ಆಜಾದ್ ಮಾದರಿ ಶಾಲೆ ಉಳಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಇಮ್ರಾನ್ ಅಹಮದ್, ಪದಾಧಿಕಾರಿಗಳಾದ ಸಲೀಂ ಖಾನ್, ಅಬ್ದುಲ್ ಮುಜೀಬ್, ಖಲೀಂವುಲ್ಲಾ, ಅಲ್ಲಾಭಕ್ಷ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT