ಶಿವಮೊಗ್ಗ: ರಾಜ್ಯದಾದ್ಯಂತ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಕುರಿತು ಇಲ್ಲಿನ ಕೋಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ.

‘ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಸಾರ್ವಜನಿಕರೊಬ್ಬರು ಪದವಿಪೂರ್ವ ಶಿಕ್ಷಣ ಇಲಾಖೆಯ ತುಮಕೂರು ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿಪಿಯು) ಕಳುಹಿಸಿದ್ದಾರೆ. ಪ್ರಶ್ನೆಪತ್ರಿಕೆಯ ವಾಟರ್ಮಾರ್ಕ್ನಿಂದ ಅದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ್ದು ಎಂಬುದು ಗೊತ್ತಾಗಿದೆ. ನಂತರ ಅದನ್ನು ಅವರು ನಮಗೆ ಕಳಿಸಿಕೊಟ್ಟಿದ್ದರು’ ಎಂದು ಡಿಡಿಪಿಯು ಚಂದ್ರಪ್ಪ ಗುಂಡಪಲ್ಲೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಆ ಪ್ರಶ್ನೆಪತ್ರಿಕೆ ಯಾವ ಕೇಂದ್ರಕ್ಕೆ ಹಂಚಿಕೆಯಾಗಿತ್ತು. ಎಲ್ಲಿ ಸೋರಿಕೆಯಾಗಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.