ಶನಿವಾರ, ಜನವರಿ 29, 2022
22 °C

ದನದ ಮಾಂಸ ಮಾರಾಟ: 3 ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾಳಕೊಪ್ಪ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಿಕ್ಕಜಂಬೂರು ಗ್ರಾಮದಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಸಬ್ ಇನ್‌ಸ್ಪೆಕ್ಟರ್ ರಮೇಶ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಾದ ಬಷೀರ್(52), ರಹುಲ್ಲಾ(22) ಅವರಿಂದ ₹9 ಸಾವಿರ ಬೆಲೆಯ 45 ಕೆ.ಜಿ. ದನದ ಮಾಂಸ ಹಾಗೂ ಹಜರತ್ ಉಮ್ಮರ (19) ಎಂಬಾತನನ್ನು ಬಂಧಿಸಿ ₹26 ಸಾವಿರ ಮೌಲ್ಯದ 130 ಕೆ.ಜಿ. ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸರಾದ ಅಶೋಕ, ಮಂಜುನಾಥ, ಲೋಕಾನಾಯ್ಕ್, ಕಾರ್ತಿಕ ಹಾಗೂ ಪಶುವೈದ್ಯ ರಾಜು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.