ಸೋಮವಾರ, ಮೇ 23, 2022
27 °C

ಗಾಂಜಾ ಮಾರಾಟ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಲ್ಲಿನ ಶಕ್ತಿಧಾಮ–2 ಲೇಔಟ್‌ ಬಳಿ ಗಾಂಜಾ‌‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು‌ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಶಿವಮೊಗ್ಗ ಟೌನ್ ನಿವಾಸಿ ಸಚಿನ್, ಕೋಟೆಗಂಗೂರು ನಿವಾಸಿ ಸತೀಶ್ ಬಂಧಿತ ಆರೋಪಿಗಳು. ಬಂಧಿತರಿಂದ 420 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್, ಸಿಪಿಐ ಸಂಜೀವ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಮಂಜುನಾಥ್, ಸಿಬ್ಬಂದಿ ಎಚ್.ಸಿ. ಯಶವಂತಕುಮಾರ್‌‌‌‌‌, ಮಂಜುನಾಥ್‌, ಧನ್ಯಾನಾಯ್ಕ, ಕಲ್ಮೇಶ ತಂಡ ದಾಳಿ ನಡೆಸಿತ್ತು.

ಮಾಹಿತಿ ನೀಡಿ: ಗಾಂಜಾ ಹಾಗೂಇತರೆ ಮಾದಕ ವಸ್ತುಗಳ ಮಾರಾಟದಬಗ್ಗೆ ಸಾರ್ವಜನಿಕರು ಜಿಲ್ಲಾ ಪೊಲೀಸ್ ಕಚೇರಿ (9480803301)ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.