ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಗಾಂಜಾ ಮಾರಾಟ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾವತಿಯ ಸಿದ್ದಾಪುರದ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ನ್ಯೂಟೌನ್ ಠಾಣಾ ಪೊಲೀಸರು ಬಂಧಿಸಿದ್ದು, 1 ಕೆ.ಜಿ. 800ಗ್ರಾಂ ತೂಕದ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಭದ್ರಾವತಿ ಟೌನ್ ವಾಸಿಗಳಾದ ಚೆಲುವಕುಮಾರ್, ಧೀರಜ್ ಸಿಂಗ್ ಬಂಧಿತರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಭದ್ರಾವತಿ ಉಪವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ನಗರ ವೃತ್ತದ ಸಿಪಿಐ ರಾಘವೇಂದ್ರ ಕಾಂಡಿಕೆ ನೇತೃತ್ವದ ತಂಡ ದಾಳಿ ನಡೆಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.