ಮಂಗಳವಾರ, ಅಕ್ಟೋಬರ್ 26, 2021
20 °C

ಗಾಂಜಾ ಮಾರಾಟ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ನಾಲ್ವರಲ್ಲಿ ಇಬ್ಬರು ಯುವಕರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿ ಸುಲ್ತಾನ್ ಮಟ್ಟಿಯ ಕೀರ್ತನ್ (19), ಮನೋಜ್ (20)ನನ್ನು ಪೊಲೀಸರು ಬಂಧಿಸಿದ್ದು, ಭದ್ರಾವತಿಯ ಸುಲ್ತಾನ್ ಮಟ್ಟಿಯ ಲೋಹಿತ್, ಮಧು ಪರಾರಿಯಾಗಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್‌ಪೋಸ್ಟ್‌ನಲ್ಲಿ ಪಿಎಸ್‌ಐ ಕವಿತಾ ಮತ್ತು ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾಗ ಬೊಲೆರೋ ಪಿಕಪ್ ವಾಹನದಲ್ಲಿ 20 ಕೆ.ಜಿ. ಗಾಂಜಾ ಪತ್ತೆಯಾಗಿದೆ.‌

ಆಂಧ್ರಪ್ರದೇಶಕ್ಕೆ ಮಾರಾಟ ಮಾಡಲು ಗಾಂಜಾ ಸಾಗಿಸುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಬಂಧಿತರಿಂದ ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಬೊಲೆರೋ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು