ಸಾಗರ: ‘ತಾಲ್ಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಸಂಘಟನೆಯು ಭೂ ಸುಧಾರಣಾ ಕಾಯ್ದೆಯ ಸುವರ್ಣ ಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ಮಾರ್ಚ್ 1 ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದ್ದಾರೆ.

ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಹಿರಿಯ ಸಮಾಜವಾದಿ ಮುಖಂಡ ಬಿ.ಆರ್.ಜಯಂತ್ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಭೂ ಸುಧಾರಣಾ ಕಾಯ್ದೆ ಜಾರಿಯಿಂದ 4.85 ಲಕ್ಷ ರೈತ ಕುಟುಂಬಗಳಿಗೆ ಭೂಮಿಯ ಹಕ್ಕು ದೊರಕಿದೆ. ಈಗ ಆ ಕುಟುಂಬಗಳ ಸಂಖ್ಯೆ 30 ಲಕ್ಷ ದಾಟಿದೆ. ಕಾಯ್ದೆಯಿಂದಾಗಿ ಭೂಮಿಯ ಹಕ್ಕು ಪಡೆದವರು ಕಾಯ್ದೆಯ ಜಾರಿಗೆ ಕಾರಣರಾದವರನ್ನು ಮರೆತಿರುವುದು ಬೇಸರದ ಸಂಗತಿ’ ಎಂದು ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ್ ಈ. ಕೆಳದಿ ಹೇಳಿದರು.

ಪ್ರಮುಖರಾದ ಭದ್ರೇಶ್ ಬಾಳಗೋಡು, ಕುಮಾರ್ ಗೌಡ, ಚಂದ್ರಪ್ಪ ಆಲಳ್ಳಿ, ರಾಮಚಂದ್ರಪ್ಪ, ಚಂದ್ರಶೇಖರ ಗೌಡ, ಶಿವು ಮೈಲಾರಿಕೊಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.