ಸಾಗರ: ಇಲ್ಲಿನ ನಗರಸಭೆ ಸದಸ್ಯರು ತಮ್ಮ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ₹ 40 ಲಕ್ಷ ವೆಚ್ಚದಲ್ಲಿ ದೆಹಲಿ, ಹರಿಯಾಣ ರಾಜ್ಯಕ್ಕೆ ಅಧ್ಯಯನ ಪ್ರವಾಸ ಹೊರಡಲು ಸಿದ್ಧತೆ ನಡೆಸಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಗರಸಭೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತವಿದೆ. ಈಗಿನ ಸದಸ್ಯರ ಅವಧಿ ಈ ಸಾಲಿನ ಅಕ್ಟೋಬರ್ 25ಕ್ಕೆ ಕೊನೆಗೊಳ್ಳಲಿದೆ. ಈ ಹಂತದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸಾರ್ವಜನಿಕರ ತೆರಿಗೆ ಹಣ ವ್ಯಯಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ.

‘ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಕೇವಲ ಇಲ್ಲಿನ ನಗರಸಭೆಗೆ ಸೀಮಿತವಾಗಿಲ್ಲ. ಪಕ್ಷಾತೀತವಾಗಿ ಎಲ್ಲರ ಅಭಿಪ್ರಾಯ ಪಡೆದು ಮುನ್ನಡೆಯಲಾಗುತ್ತಿದೆ’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳುತ್ತಾರೆ.

‘ಜನಪ್ರತಿನಿಧಿಗಳು ಈ ರೀತಿ ಅಧ್ಯಯನ ಪ್ರವಾಸ ಮಾಡುವುದು ಮೊದಲಿನಿಂದಲೂ ನಡೆದು ಬಂದ ಪ್ರತೀತಿ. ಇದರಲ್ಲಿ ಹೊಸತೇನೂ ಇಲ್ಲ. ಉತ್ತರ ಭಾರತದ ಕೆಲವೊಂದು ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ವಿಲೇವಾರಿ ಸೇರಿದಂತೆ ಹಲವು ವಿಷಯಗಳಲ್ಲಿ ಮಾದರಿ ಕಾರ್ಯ ಕೈಗೊಂಡಿವೆ. ಈ ಕುರಿತು ಕಲಿಯುವ, ತಿಳಿಯುವ ಉದ್ದೇಶದಿಂದ ಪ್ರವಾಸ ನಡೆಸಲಾಗುತ್ತದೆ’ ಎಂದು ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು ತಿಳಿಸುತ್ತಾರೆ.

‘ಕಳೆದ ತಿಂಗಳಿನಿಂದ ಸುರಿದ ಭಾರೀ ಮಳೆಯಿಂದಾಗಿ ನಗರದ ಹೃದಯ ಭಾಗದ ರಸ್ತೆಗಳು ಸೇರಿ ಹಲವೆಡೆ ಹೊಂಡ, ಗುಂಡಿಗಳು ಸೃಷ್ಟಿಯಾಗಿದ್ದು, ಇವುಗಳನ್ನು ದುರಸ್ತಿ ಮಾಡಲು ನಗರಸಭೆಯಲ್ಲಿ ಹಣದ ಕೊರತೆ ಇದೆ. ಹೀಗಿರುವಾಗ ಪ್ರವಾಸಕ್ಕೆ ಜನರ ಹಣವನ್ನು ಖರ್ಚು ಮಾಡುವುದು ಸರಿಯಲ್ಲ’ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

‘ಈಗಿನ ಸದಸ್ಯರ ಅವಧಿ ಮುಗಿಯಲು ಕೇವಲ ಎರಡೂವರೆ ತಿಂಗಳು ಮಾತ್ರ ಇರುವಾಗ ಅಧ್ಯಯನ ಪ್ರವಾಸಕ್ಕೆ ತೆರಳಿ ಅಲ್ಲಿ ನೋಡಿದ್ದನ್ನು ಇಲ್ಲಿ ಅನುಷ್ಠಾನಗೊಳಿಸಲು ನಿಜಕ್ಕೂ ಸಾಧ್ಯವೇ?’ ಎಂದು ಗಾಂಧಿನಗರ ಬಡಾವಣೆ ನಿವಾಸಿ ಎನ್.ಶ್ರೀನಾಥ್ ಪ್ರಶ್ನಿಸುತ್ತಾರೆ.

ಬಿಜೆಪಿ ಯಾವತ್ತೂ ಸಾರ್ವಜನಿಕರ ಅಭಿಪ್ರಾಯದ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ಈ ಬಗ್ಗೆ ಪಕ್ಷದ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದೇವೆ
ಟಿ.ಡಿ.ಮೇಘರಾಜ್ ನಗರಸಭಾ ಸದಸ್ಯ

ಇಂದಿನ ಸಭೆಯಲ್ಲಿ ತೀರ್ಮಾನ

ನಗರಸಭೆ ಸದಸ್ಯರು ಅಧ್ಯಯನ ಪ್ರವಾಸಕ್ಕೆ ತೆರಳಬೇಕೆ ಬೇಡವೇ ಎನ್ನುವ ಬಗ್ಗೆ ಮಂಗಳವಾರ ನಡೆಯಲಿರುವ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಬಿಜೆಪಿ ಕಾಂಗ್ರೆಸ್ನ ಕೆಲವು ಸದಸ್ಯರು ಈ ಹೊತ್ತಿನಲ್ಲಿ ಪ್ರವಾಸ ಕೈಗೊಳ್ಳುವ ಅಗತ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.