ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶರಣರ ಚಿಂತನೆ ಅಳವಡಿಸಿಕೊಳ್ಳಿ: ಚನ್ನಬಸವ ಸ್ವಾಮೀಜಿ

Published : 19 ಆಗಸ್ಟ್ 2024, 16:28 IST
Last Updated : 19 ಆಗಸ್ಟ್ 2024, 16:28 IST
ಫಾಲೋ ಮಾಡಿ
Comments

ಶಿಕಾರಿಪುರ: ‘ಸಮಾಜದ ಅಂಕುಡೊಂಕು ತಿದ್ದಿದ ಶಿವ ಶರಣರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿರಕ್ತಮಠದ ಪೀಠಾಧ್ಯಕ್ಷ ಚನ್ನಬಸವ ಸ್ವಾಮೀಜಿ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಬಸವಾದಿ ಶರಣರು ಸಮಾಜದ ಜನರ ಏಳಿಗೆಗೆ ಪೂರಕವಾದ ಸಂದೇಶಗಳನ್ನು ತಮ್ಮ ವಚನಗಳ ಮೂಲಕ ಹೇಳಿದ್ದಾರೆ. ನುಲಿಯ ಚಂದಯ್ಯ ಕಾಯಕ ತತ್ವದ ಸಂದೇಶ ಸಾರಿದ್ದರು. ಶರಣರು ಕಾಯಕ ತತ್ವ ಹಾಗೂ ದಾಸೋಹ ತತ್ವವನ್ನು ಜಗತ್ತಿಗೆ ಸಾರಿದ್ದರು. ಅಕ್ಕಮಹಾದೇವಿ, ಅಲ್ಲಮಪ್ರಭು ಸೇರಿ ಹಲವು ಶರಣರು ತಾಲ್ಲೂಕಿನಲ್ಲಿ ಜನ್ಮತಾಳಿದ್ದು ಹೆಮ್ಮೆಯ ಸಂಗತಿಯಾಗಿದೆ’ ಎಂದರು.

ಗ್ರೇಡ್– 2 ತಹಶೀಲ್ದಾರ್ ರಂಜಿತ್ ಕಾರ್ಯಕ್ರಮ ಉದ್ಘಾಟಿಸಿದರು. ನುಲಿಯ ಚಂದಯ್ಯ ಜೀವನ ಕುರಿತು ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು ಉಪನ್ಯಾಸಕ ಕೆ.ಎಚ್. ಪುಟ್ಟಪ್ಪ ಉಪನ್ಯಾಸ ನೀಡಿದರು.

ತಾಲ್ಲೂಕು ಪಂಚಾಯಿತಿ ಪ್ರಭಾರ ಇಒ ಕಿರಣ್ ಕುಮಾರ್ ಹರ್ತಿ, ಕೊರಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಆನಂದಪ್ಪ ಹೊಸೂರು, ಕೊರಚ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಭದ್ರಾಪುರ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT