ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆಯನ್ನು ಉದ್ಘಾಟಿಸಿದ್ದಾರೆ
ಪ್ರವಾಹ, ಗಾಳಿಯ ಒತ್ತಡವನ್ನು ನಿಭಾಯಿಸುವ ಜೊತೆಗೆ 100 ಟನ್ ತಾಳಿಕೊಳ್ಳುವ ಸಾಮರ್ಥ್ಯ ಸೇತುವೆ ಹೊಂದಿದೆ
ಅಂಬಾರಗೋಡ್ಲು–ಕಳಸವಳ್ಳಿ ನಡುವೆ 2.44 ಕಿಲೋಮೀಟರ್ ಉದ್ದದ ತೂಗು ಸೇತುವೆ ನಿರ್ಮಾಣ ಆಗಿದೆ
ಶರಾವತಿ ಹಿನ್ನೀರು ಪೂರ್ಣ ಭರ್ತಿ ಆದಾಗ 150 ಅಡಿಯಷ್ಟು ಆಳ ನೀರು ಸಂಗ್ರಹವಾಗಿರುತ್ತದೆ. ಹೀಗಾಗಿ ಸೇತುವೆಯನ್ನು ಅಂತರರಾಷ್ಟ್ರೀಯ ಗುಣಮಟ್ಟದ ಉತ್ಕೃಷ್ಟ ತಾಂತ್ರಿಕತೆ ಬಳಸಿ ವಿನ್ಯಾಸಗೊಳಿಸಲಾಗಿದೆ.
740 ಮೀಟರ್ ದೂರ ಕೇಬಲ್ ನೆರವಿನಿಂದ ಇರುವ ತೂಗು ಸೇತುವೆ ಆಗಿದ್ದು, ನಾಲ್ಕು ಪಿಲ್ಲರ್‌ಗಳ ಮೇಲೆ ನಿಂತಿದೆ