ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡಲು ಜಂಟಿ ಸರ್ವೆ

ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ
Last Updated 6 ನವೆಂಬರ್ 2020, 8:19 IST
ಅಕ್ಷರ ಗಾತ್ರ

ಬೆಂಗಳೂರು: ಶರಾವತಿ ಅಣೆಕಟ್ಟೆ ನಿರ್ಮಾಣದಿಂದ ಮುಳುಗಡೆ ಸಂತ್ರಸ್ತರಾದ ಜನರಿಗೆ 9,773 ಎಕರೆ ಜಮೀನು ಮಂಜೂರು ಮಾಡಲು ತಕ್ಷಣವೇ ಜಂಟಿ ಸಮೀಕ್ಷೆ ನಡೆಸುವಂತೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದರು.

ಮುಳುಗಡೆ ಸಂತ್ರಸ್ತರಾಗಿರುವ ಜನರು ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿಕಾರಿಪುರ ಮತ್ತು ಶಿವಮೊಗ್ಗ ತಾಲ್ಲೂಕುಗಳಲ್ಲಿ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಆಯಾ ಕುಟುಂಬಗಳಿಗೆ ನೀಡುವ ಸಂಬಂಧ ಮುಖ್ಯಮಂತ್ರಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದರು.

ತಕ್ಷಣ ಜಂಟಿ ಸಮೀಕ್ಷೆ ನಡೆಸಿ ಜಮೀನುಗಳ ಗಡಿ ಗುರುತಿಸಬೇಕು. ಸಂತ್ರಸ್ತ ಕುಟುಂಬಗಳು ಸಾಗುವಳಿ ಮಾಡುತ್ತಿರುವ ಜಮೀನುಗಳ ಖಾತೆಯನ್ನು ಅವರ ಹೆಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು. ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT