ಶಿವಮೊಗ್ಗ: ಜಿಲ್ಲೆಯ ಕಾರ್ಗಲ್‌ನ ಬಳಿಯ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಿಂದ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ವಿಶ್ವೇಶ್ವರಯ್ಯ ಜಲನಿಗಮ (ವಿಜೆಎನ್‌ಎಲ್) ಮುಂದಾಗಿದೆ.

ವಿಜೆಎನ್‌ಎಲ್ ಕಾರ್ಯಸಾಧ್ಯತಾ ವರದಿ ಸಲ್ಲಿಕೆಗೆ ಬೆಂಗಳೂರಿನ ಈಐ ಟೆಕ್ನಾಲಜೀಸ್ ಸಂಸ್ಥೆಗೆ ಹೊಣೆ ವಹಿಸಿದೆ. ಮೂರರಿಂದ ನಾಲ್ಕು ತಿಂಗಳಲ್ಲಿ ಸಂಸ್ಥೆ ವರದಿ ನೀಡಬಹುದು ಎಂದು ತಿಳಿದುಬಂದಿದೆ.

2018ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶರಾವತಿ ನೀರನ್ನು ಬೆಂಗಳೂರಿಗೆ ಪೂರೈಸುವ ಪ್ರಸ್ತಾಪ ಮುನ್ನೆಲೆಗೆ ಬಂದಿತ್ತು. ಆದರೆ, ಪರಿಸರಾಸಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿ, ಶಿವಮೊಗ್ಗ ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಮತ್ತೆ ಆ ಯೋಜನೆಗೆ ಜೀವ ನೀಡಲಾಗಿದೆ. ಶರಾವತಿಯ 15 ಟಿಎಂಸಿ ಅಡಿ ನೀರನ್ನು ಬೆಂಗಳೂರಿಗೆ ಪೂರೈಸಲು ಜಲಮಂಡಳಿ ಆಸಕ್ತಿ ತೋರಿದೆ.

ಕಾರ್ಯಸಾಧ್ಯತಾ ವರದಿ ಪಡೆಯಲು ಟೆಂಡರ್ ಕರೆಯಲಾಗಿದೆ. ವರದಿ ಬಂದ ನಂತರ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ವಿಶ್ವೇಶ್ವರಯ್ಯ ಜಲನಿಗಮದ ಎಂಜಿನಿಯರ್ ವರದಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.