ಮಂಗಳವಾರ, ಡಿಸೆಂಬರ್ 1, 2020
18 °C

ಶಿಕಾರಿಪುರ: ಟಿಎಪಿಸಿಎಂಎಸ್‌ಗೆ ‌ಶಶಿಧರ್‌ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚುರ್ಚಿಗುಂಡಿ ಶಶಿಧರ್‌ ಹಾಗೂ ಉಪಾಧ್ಯಕ್ಷರಾಗಿ ಕೆ.ಯು. ಗಂಗಾಧರ್‌ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಡಿಸಿಸಿ ಬ್ಯಾಂಕ್ ಪ್ರಭಾರ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ‘ಟಿಎಪಿಸಿಎಂಎಸ್‌ ರೈತರ ಸಂಸ್ಥೆಯಾಗಿದೆ. ಕಳೆದ ವರ್ಷಗಳಲ್ಲಿ ನಷ್ಟದಲ್ಲಿದ್ದ ಟಿಎಪಿಸಿಎಂಎಸ್‌ ಪ್ರಸ್ತುತ ಲಾಭದಲ್ಲಿದೆ. ನೂತನ ಅಧ್ಯಕ್ಷ ಚುರ್ಚಿಗುಂಡಿ ಶಶಿಧರ್‌ ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ’ ಎಂದರು.

ಅಧ್ಯಕ್ಷ ಚುರ್ಚಿಗುಂಡಿ ಶಶಿಧರ್‌, ‘ಎಲ್ಲಾ ಕೃಷಿ ಪರಿಕರಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ನಿಟ್ಟಿನಲ್ಲಿ ಕೃಷಿ ಮಾಲ್‌ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇನೆ. ಟಿಎಪಿಸಿಎಂಎಸ್‌ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸಹಕಾರ ನೀಡಿದ್ದಾರೆ’ ಎಂದರು.

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜೆ. ಸುಕೇಂದ್ರಪ್ಪ, ರಾಜ್ಯ ಸಹಕಾರ ಕುಕ್ಕುಟ ಮಹಾಮಂಡಳ ಸದಸ್ಯ ಕಬಾಡಿ ರಾಜಪ್ಪ, ಟಿಎಪಿಸಿಎಂಎಸ್‌ ನಿರ್ದೇಶಕರಾದ ಅಗಡಿ ಅಶೋಕ್, ಬಿ.ಡಿ. ಭೂಕಾಂತ್‌, ಚನ್ನಪ್ಪ, ಎಸ್‌.ಎಸ್‌. ರಾಘವೇಂದ್ರ, ಎ.ಬಿ. ಸುಧೀರ್‌, ಹಳ್ಳೂರು ಪರಮೇಶ್ವರಪ್ಪ, ಅನೂಪ್‌, ಸುನಿತಾ, ಪ್ರೇಮಾ, ಬಸವಣ್ಯಪ್ಪ, ಜಯನಾಯ್ಕ, ಸುರೇಶ್‌ಗೌಡ್ರು, ಮಾಜಿ ಅಧ್ಯಕ್ಷ ಬೆಣ್ಣೆ ದೇವೇಂದ್ರಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.