ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ ಆರೋಗ್ಯವಾಗಿದ್ದರೆ ಮಗು ಸದೃಢ: ಸಚಿವೆ ಶಶಿಕಲಾ ಜೊಲ್ಲೆ ಅಭಿಮತ

Last Updated 22 ಮೇ 2020, 14:39 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಯಿ ಆರೋಗ್ಯವಾಗಿದ್ದಾಗ ಆರೋಗ್ಯವಂತ ಮಗು ಜನಿಸಲುಸಾಧ್ಯ. ಹಾಗಾಗಿ, ಪ್ರತಿಯೊಬ್ಬ ಮಹಿಳೆಯೂ ಆರೋಗ್ಯದ ಕಡೆ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆಸಲಹೆ ನೀಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಪೌಷ್ಟಿಕಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಜಿಲ್ಲೆಯ 180 ಮಕ್ಕಳು ಹಾಗೂ ಅಪೌಷ್ಟಿಕತೆಯ ಅಂಚಿನಲ್ಲಿರುವ 4,620ಮಕ್ಕಳು ಸೇರಿ 4,800 ಮಕ್ಕಳಗೆ ಪೌಷ್ಟಿಕಾಂಶಯುಕ್ತ ಚಾಕೋಲೇಟ್‌ ಉಚಿತವಾಗಿ ವಿತರಿಸಲಾಗುತ್ತಿದೆ. ಈ ಚಾಕೋಲೇಟ್‌ಗಳನ್ನುದಿನಕ್ಕೆ ಒಂದರಂತೆ ಮಗುವಿಗೆ ನೀಡಬೇಕು. ನಿಯಮಿತವಾಗಿ ನೀಡಿದರೆ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ. ಅಪೌಷ್ಟಕತೆ ನಿಯಂತ್ರಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ಈ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ ಬೆಳಗಾವಿ, ಶಿವಮೊಗ್ಗ, ಉತ್ತರ ಕನ್ನಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಆರಂಭಿಸಲಾಗುತ್ತಿದೆ.ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ವಿಸ್ತರಿಸಲಾಗುವುದು. ತಾಯಿ ಮತ್ತು ಮಕ್ಕಳ ಸಬಲೀಕರಣದಂತಹ ಮಹತ್ವದ ಕಾರ್ಯಕ್ರಮ ಆಯೋಜಿಸುವಲ್ಲಿಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಅವರ ಸುರಕ್ಷತೆ ಹಾಗೂ ರಕ್ಷಣೆಗೆ ಅಗತ್ಯ ಕ್ರಮ ವಹಿಸಿದೆ. ಅವರ ತಪಾಸಣೆ, ಔಷಧೋಪಚಾರ, ಪೌಷ್ಟಿಕಆಹಾರ ವಿತರಣೆಗೂಆದ್ಯತೆ ನೀಡಿದೆ ಎಂದು ವಿವರ ನೀಡಿದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ, ಎದುರಿಸುತ್ತಿರುವ ಸವಾಲುಗಳನ್ನು ಅರಿತು ಅವರ ಸಂಕಷ್ಟಗಳಿಗೆ ಪೂರಕವಾಗಿ ಸರ್ಕಾರ ಸ್ಪಂದಿಸಿದೆ. ಅವರ ವೇತನದಲ್ಲಿ ಹೆಚ್ಚಳ ಮಾಡಿದೆ. ಬಾಕಿ ವೇತನವನ್ನೂ ಜಮೆ ಮಾಡಿದೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕೊರೊನಾನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರಶ್ರಮ ಸ್ಮರಣೀಯ. ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಧಾವಿಸುವುದು ಶ್ರೀಮಂತ ಭಾರತೀಯ ಸಂಸ್ಕೃತಿಯ ಪ್ರತೀಕ. ಯಾವುದೇ ಧರಣಿಯ ಮೂಲಕಸರ್ಕಾರದಗಮನ ಸೆಳೆಯುವ ಅಗತ್ಯವಿಲ್ಲ. ಸರ್ಕಾರವೇ ನೇರವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮೇಯರ್‌ಸುವರ್ಣಾಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪಂಚಾಯಿತಿಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿಸಿಇಒಅಧಿಕಾರಿ ಎಂ.ಎಲ್.ವೈಶಾಲಿ, ಹರಿಹರದ ಅಗ್ರಿಟೆಕ್ ಸಂಸ್ಥೆಯ ವ್ಯವಸ್ಥಾಪಕ ಸಿದ್ಧಾರ್ಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಈರಣ್ಣ ಎಸ್.ಪಾಂಚಾಳ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT