ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕಾರಿಪುರ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಶೇ 99ರಷ್ಟು ನಿಧಿ ಬಳಕೆ

Last Updated 21 ನವೆಂಬರ್ 2021, 6:10 IST
ಅಕ್ಷರ ಗಾತ್ರ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಶಾಸಕರ ನಿಧಿಯ ಬಹುಪಾಲು ಅನುದಾನವನ್ನು ಗ್ರಾಮೀಣ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿದ್ದಾರೆ.

2018-19ನೇ ಸಾಲಿನಲ್ಲಿ ದೊರೆತ ₹ 2 ಕೋಟಿಯಲ್ಲಿ ₹ 1.99 ಕೋಟಿ ಹಣ ಹಂಚಿಕೆ ಮಾಡಿದ್ದಾರೆ. ತಾಲ್ಲೂಕಿನ ಗ್ರಾಮಗಳಲ್ಲಿ ರಸ್ತೆಗಳ ನಿರ್ಮಾಣಕ್ಕಾಗಿ ₹ 1.31ಕೋಟಿ ಹಣವನ್ನು, ತಾಲ್ಲೂಕಿನ ಕುಸ್ಕೂರು ಗ್ರಾಮದ ರಾಮಲಿಂಗೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ₹ 15 ಲಕ್ಷ, ನೆಲವಾಗಿಲು ಗ್ರಾಮದ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ₹ 12 ಲಕ್ಷ ಅನುದಾನ ನೀಡಿದ್ದಾರೆ.

ಸಂಕ್ಲಾಪುರ, ನೆಲವಾಗಿಲು, ಮತ್ತಿಕೋಟೆ, ಜೋಗಿಹಳ್ಳಿ ಗ್ರಾಮಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ತಲಾ ₹ 3 ಲಕ್ಷ ಅನುದಾನ ನೀಡಲಾಗಿದೆ. ಹೊಸದೂಪದಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ₹ 5 ಲಕ್ಷ, ಸುಣ್ಣದಕೊಪ್ಪ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ₹ 3 ಲಕ್ಷ ಹಂಚಿಕೆ ಮಾಡಲಾಗಿದೆ.

ಶಿಕಾರಿಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಕಾಮಗಾರಿಗೆ ₹ 8.50 ಲಕ್ಷ, ಹರಗುವಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ₹ 3 ಲಕ್ಷ, ಚೌಡನಾಯಕನಕೊಪ್ಪ ಗ್ರಾಮದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ₹ 7.46 ಲಕ್ಷ ನೀಡಿದ್ದಾರೆ. ಶೇ 99ರಷ್ಟು ಅನುದಾನ ಬಳಕೆ ಮಾಡಿಕೊಂಡಿದ್ದಾರೆ.

2019-20ನೇ ಸಾಲಿನಲ್ಲಿ ದೊರೆತ ₹ 2 ಕೋಟಿಯಲ್ಲಿ ₹ 1.99 ಕೋಟಿ ಹಂಚಿಕೆ ಮಾಡಿದ್ದಾರೆ. ತಾಲ್ಲೂಕಿನ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕಾಗಿ ₹ 1.31 ಕೋಟಿ, ಶಿಕಾರಿಪುರ ಪಟ್ಟಣದ ಎಪಿಎಂಸಿ ಆವರಣದಲ್ಲಿನ ಕೃಷಿ ಸಮಾಜ ಕಟ್ಟಡ ಕಾಮಗಾರಿಗೆ ₹ 5 ಲಕ್ಷ, ತಾಲ್ಲೂಕಿನ ಶಿವನಪಾದ ದೇವಸ್ಥಾನ ಪ್ರಾಂಗಣ ನಿರ್ಮಾಣ ಕಾಮಗಾರಿಗೆ ₹ 8 ಲಕ್ಷ, ಕಿಟ್ಟದಹಳ್ಳಿ ಗ್ರಾಮದ ಸಹಕಾರ ಸಂಘದ ಕಟ್ಟಡ ಕಾಮಗಾರಿಗೆ ₹ 5 ಲಕ್ಷ, ಕಪ್ಪನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಿರುವ ಅಡುಗೆ ಕೋಣೆ ಕಟ್ಟಡ ಕಾಮಗಾರಿಗೆ ₹ 4 ಲಕ್ಷ, ಬಗನಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ₹ 4 ಲಕ್ಷ, ಮುಡುಬ ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಂಗಮಂದಿರ ನಿರ್ಮಾಣಕ್ಕೆ ₹ 4.88 ಲಕ್ಷ, ಅಂಗವಿಕಲರಿಗೆ ತ್ರಿಚಕ್ರ ವಾಹನ ಖರೀದಿಗೆ ₹ 4.50 ಲಕ್ಷ ನೀಡಿದ್ದಾರೆ. ಶೇ 99ರಷ್ಟು ಅನುದಾನ ಬಳಕೆ ಮಾಡಿಕೊಂಡಿದ್ದಾರೆ.

2021-22ನೇ ಸಾಲಿನಲ್ಲಿ ದೊರೆತ ₹ 2 ಕೋಟಿಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ₹ 1.10 ಕೋಟಿ ನೀಡಿದ್ದಾರೆ. ಶಾಸಕ ಬಿ.ಎಸ್. ಯಡಿಯೂರಪ್ಪ ಶಾಸಕರ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದಾರೆ.

ಕೋಟ್‌...

ಶಾಸಕರ ನಿಧಿಯನ್ನು ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿ ನಡೆಸಲು ಸಮರ್ಪಕವಾಗಿ ಬಳಸಿಕೊಂಡಿದ್ದೇನೆ. ನನಗೆ ರಾಜಕೀಯ ಜನ್ಮ ನೀಡಿದ ಜನರ ಋಣ ತೀರಿಸಲು ನೂರಾರು ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದೇನೆ. ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ.
-ಬಿ.ಎಸ್. ಯಡಿಯೂರಪ್ಪ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT