ಶಿಕಾರಿಪುರ: ಪಟ್ಟಣದ ಕುಮದ್ವತಿ ಕಾಲೇಜಿನ ಎದುರು ಸೋಮವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 27 ಜನ ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಜನ ಬಸ್ಸಿನಲ್ಲಿದ್ದರು.

12 ಜನರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 6 ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಗಾಯಾಳುಗಳು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.

ಶಿರಾಳಕೊಪ್ಪದ ಅಂಜಲಿ ಎಂಬ ಏಳು ತಿಂಗಳ ಗರ್ಭಿಣಿ ಮತ್ತು ನಾಗಮ್ಮ ಎಂಬ 60 ವರ್ಷದ ಮಹಿಳೆಯ ತಲೆಗೆ ಪೆಟ್ಟು ಬಿದ್ದಿದ್ದು, ಎಂಆರ್ಐ ಸ್ಕ್ಯಾನ್ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ವೈದ್ಯ ಕಿಶನ್ ಹೇಳಿದ್ದಾರೆ.

ಶಿವಮೊಗ್ಗ ಕಡೆಯಿಂದ ಪಟ್ಟಣಕ್ಕೆ ನಿತ್ಯ ಸಂಚರಿಸುವ ಈ ಬಸ್ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಎದುರಿಗೆ ಬಂದ ಬೈಕ್ ತಪ್ಪಿಸಲು ಮುಂದಾದ ಚಾಲಕ, ಬಸ್ಸನ್ನು ರಸ್ತೆಬದಿಗೆ ಚಲಾಯಿಸಿದರು. ಆದರೆ ಕಾಲೇಜು ಪ್ರವೇಶದ್ವಾರದ ಎದುರಿನಲ್ಲಿ ನಿಂತಿದ್ದ ಇಬ್ಬರು ವ್ಯಕ್ತಿಗಳಿಗೆ ಬಸ್ ಡಿಕ್ಕಿಯಾಗಬೇಕಿತ್ತು. ಇದನ್ನು ತಪ್ಪಿಸುವ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿತು. ಚಾಲಕನ ಸಮಯಪ್ರಜ್ಞೆ ಮತ್ತು ಡಿವೈಡರ್, ವಿದ್ಯುತ್ ಕಂಬಗಳು ಅಡ್ಡಲಾಗಿದ್ದ ಪರಿಣಾಮ, ದೊಡ್ಡ ಅಪಘಾತವೊಂದು ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು.

ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕಬ್ಬಿಣದ ಎರಡು ವಿದ್ಯುತ್ ಕಂಬ, ವಿದ್ಯುತ್ ಕಂಬಗಳು ಮುರಿದಿವೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಭೇಟಿ: ಅಪಘಾತದ ಸುದ್ದಿ ತಿಳಿದು ಪಟ್ಟಣಕ್ಕೆ ಆಗಮಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರು ಸರ್ಕಾರಿ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಚಿಕಿತ್ಸೆ ಕುರಿತು ಚರ್ಚಿಸಿ, ಗಾಯಾಳುಗಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-1344085392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.