ಶಿಕಾರಿಪುರ: ಭಗವಂತ ನೀಡಿದ ಕಣ್ಣನ್ನು ರಕ್ಷಣೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಪಟ್ಟಣದಲ್ಲಿ ಶನಿವಾರ ಪ್ರಸಾದ್ ನೇತ್ರಾಲಯ ಉಡುಪಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ನೇತ್ರ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಮುಖ್ಯ. ಸಮಾಜ ಅಭಿವೃದ್ಧಿಯತ್ತ ಸಾಗುತ್ತಿದ್ದರೂ ಆರೋಗ್ಯ ಸೇವೆ ಪಡೆಯಲು ಶಕ್ತರು, ಅಶಕ್ತರ ನಡುವಿನ ಕಂದಕ ಹೆಚ್ಚುತ್ತಿದೆ. ಆರೋಗ್ಯ ಉಚಿತ ಸೇವೆಗಳು ಅಭಿವೃದ್ಧಿ ಕಾರ್ಯಗಳಿಗಿಂತಲೂ ಶ್ರೇಷ್ಠವಾದವು ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ ರಾಜ್ಯದಾದ್ಯಂತ ನಡೆಯುತ್ತಿತ್ತು. ಶಿಕಾರಿಪುರ ಕ್ಷೇತ್ರವು ರಾಜ್ಯವೇ ಹೆಮ್ಮೆ ಪಡುವಂತೆ ಪ್ರಗತಿಹೊಂದಿದೆ ಎಂದು ಡಾ. ಕೃಷ್ಣ ಪ್ರಸಾದ್ ಕೂಡ್ಲ ಅಭಿಪ್ರಾಯಪಟ್ಟರು.

ಸಾವಿರಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ಸಡೆಸಲಾಯಿತು.

ಮುಖಂಡರಾದ ಕೆ.ಎಸ್. ಗುರುಮೂರ್ತಿ ವಸಂತಗೌಡ, ಎಂ.ಬಿ. ಚನ್ನವೀರಪ್ಪ, ಹುಲ್ಮಾರ್ ಮಹೇಶ್, ಸಂದೀಪ, ಪಾಲಾಕ್ಷಪ್ಪ, ಈರಣ್ಣ ಗೌಡ, ಪ್ರಸಾದ್ ನೇತ್ರಾಲಯ ಉಡುಪಿಯ ಸಿಬ್ಬಂದಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-861176964

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.