ಶಿಕಾರಿಪುರ: ‘ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಸ್ಥಾಪಿಸಲ್ಪಟ್ಟ ಕನ್ನಡ ಸಾಹಿತ್ಯ ಪರಿಷತ್ ಪ್ರಸ್ತುತ ಜನಸಾಮಾನ್ಯರ ಸಂಸ್ಥೆಯಾಗಿ ಬೆಳೆದು ನಿಂತಿದೆ’ ಎಂದು ಸಾಲೂರು ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಪ್ರಕಾಶ್ ಹೇಳಿದರು.

ಪಟ್ಟಣದ ಚನ್ನಕೇಶವ ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘1942ರಲ್ಲಿ ಆರಂಭಗೊಂಡ ಕನ್ನಡ ಸಾಹಿತ್ಯ ಪರಿಷತ್ ಬೆಳವಣಿಗೆಗೆ ದಿವಾನರಾಗಿದ್ದ ಸರ್. ಎಂ.ವಿಶ್ವೇಶ್ವರಯ್ಯ ಕೊಡುಗೆ ದೊಡ್ಡದು. ಕನ್ನಡ ನಾಡು ನುಡಿ ಬೆಳವಣಿಗೆ, ಸಾಹಿತ್ಯ, ಸಂಸ್ಕೃತಿ ಉಳಿವಿಗೆ ಸಾಹಿತ್ಯ ಪರಿಷತ್ ಶ್ರಮಿಸುತ್ತಿರುವುದು ಶ್ಲಾಘನೀಯ’ ಎಂದರು.

‘ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್.ರಘು ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಪರಿಶ್ರಮ ಅಭಿನಂದನೀಯ. ಕನ್ನಡ ಪರ ಚಟುವಟಿಕೆ ನಡೆಸುವುದಕ್ಕೆ ನೆಲೆಯೊಂದು ಸಿಕ್ಕಿದ್ದು ಎಲ್ಲರೂ ಅದರ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಸನ್ಮಾನ ಸ್ವೀಕರಿಸಿದ ಹಿರಿಯ ಸದಸ್ಯ ಸುಭಾಷ್ಚಂದ್ರ ಸ್ಥಾನಿಕ್ ಹೇಳಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್.ರಘು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯ ವಸಂತ ಮಾಧವ್, ಲೇಖಕ ಹಾಗೂ ಪತ್ರಕರ್ತರಾದ ಎಂ. ನವೀನ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಮುಬೀನಾ, ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿ ವೇದಿಕೆ ಅಧ್ಯಕ್ಷ ಎಸ್.ಎನ್. ನರಸಿಂಹಸ್ವಾಮಿ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಜಿಯಾವುಲ್ಲಾ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-42-1434031037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.