ಶಿಕಾರಿಪುರ: ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ ಮೇಲೆ ಶನಿವಾರ ಚಿರತೆ ದಾಳಿ ನಡೆಸಿದೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡಗಂಟಿ ಗ್ರಾಮದ ಸುದೀಪ್, ಶುಕ್ರವಾರ ಸಂಜೆ ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿಗೆ ಮೇವು ತರಲು ಹೋಗಿದ್ದಾಗ ಚಿರತೆ ದಿಢೀರ್ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬುವರು ಶನಿವಾರ ಬೆಳಿಗ್ಗೆ ಗದ್ದೆಗೆ ನೀರು ಬಿಡುವುದಕ್ಕೆ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನೂ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಸಂಜೆ ತಡಸನಹಳ್ಳಿ, ಅಡಗಂಟಿ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಎಂಬುವರ ಮೇಲೂ ಚಿರತೆ ದಾಳಿ ನಡೆಸಲು ಯತ್ನಿಸಿದ್ದು, ಪ್ರಥಮ ಚಿಕಿತ್ಸೆ ಪಡೆದು ಅವರು ಮನೆಗೆ ತೆರಳಿದ್ದಾರೆ.

ತಡಸನಹಳ್ಳಿ, ಅಡಗಂಟಿ ಗ್ರಾಮದ ಜಮೀನಿನಲ್ಲಿ, ಮುತ್ತಗಿ ಕಿರು ಅರಣ್ಯ ಸೇರಿ ಮೂರು ಕಡೆ ಚಿರತೆ ಸೆರೆಗೆ ಬೋನ್ ಇಡಲಾಗಿದೆ. ಚಿರತೆ ಮನುಷ್ಯನ ಮೇಲೆ ದಾಳಿ ಮಾಡುವುದು ಕಡಿಮೆ. ಅದು ಯಾವುದಾದರೂ ರೋಗದಿಂದ ಬಳಲುತ್ತಿರಬಹುದು ಅಥವಾ ವಿಚಲಿತವಾಗಿರುವ ಕಾರಣಕ್ಕೆ ಮನುಷ್ಯರ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ವಲಯ ಅರಣ್ಯಾಧಿಕಾರಿ ಜಾವಿದ್ ಅಂಗಡಿ ಹೇಳಿದ್ದಾರೆ.

ಚಿರತೆ ದಾಳಿಯಿಂದಾಗಿ ಜನ ಆತಂಕಕ್ಕೊಳಗಾಗಿದ್ದು, ಜಮೀನಿಗೆ ತೆರಳುವುದಕ್ಕೆ ಹೆದರುತ್ತಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಮೀನಿಗೆ ತೆರಳುವ ಸಮಯದಲ್ಲಿ ರೈತರು ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-42-805994924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.