ಶಿಕಾರಿಪುರ: ‘ತಾಲ್ಲೂಕಿನ ಖಾಸಗಿ ಶಾಲಾ ನಾಮಫಲಕ, ಜಾಹೀರಾತು ಫಲಕದಲ್ಲಿ ಕನ್ನಡ ಬಳಸದೆ ಕಾನೂನು ಉಲ್ಲಂಘನೆ ಮಾಡಿದ್ದು, ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ರವಿನಾಯ್ಕ ಒತ್ತಾಯಿಸಿದರು.

ಗುರುವಾರ ಬಿಇಒ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಪಟ್ಟಣದಲ್ಲಿ ಖಾಸಗಿ ಶಾಲೆಯವರು ಅಳವಡಿಸಿರುವ ನೂರಾರು ಜಾಹೀರಾತು ಫಲಕದಲ್ಲಿ ಕನ್ನಡ ಬಳಕೆಯನ್ನೇ ಮಾಡಿಲ್ಲ. ನಾಮಫಲಕ, ಜಾಹೀರಾತಿನಲ್ಲಿ ಶೇ 60ರಷ್ಟು ಕನ್ನಡ ಬಳಸಬೇಕು ಎನ್ನುವ ನಿಯಮವನ್ನು ರಾಜ್ಯ ಸರ್ಕಾರ ರೂಪಿಸಿದೆ. ಅದನ್ನು ಎಲ್ಲ ಶಾಲೆಗಳು ಧಿಕ್ಕರಿಸಿವೆ’ ಎಂದು ದೂರಿದರು.

‘ಪಿಯುಸಿ, ಎಸ್ಎಸ್ಎಲ್ಸಿ ಯಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿ ಗಳ ಭಾವಚಿತ್ರದ ಫ್ಲೆಕ್ಸ್ಗಳನ್ನು ಅಳವಡಿಸಿದ್ದು, ಅವುಗಳಲ್ಲಿ ಒಂದು ಅಕ್ಷರವೂ ಕನ್ನಡದಲ್ಲಿ ಇಲ್ಲದಿರುವುದು ಬೇಸರದ ಸಂಗತಿ. ಶಾಲೆ ಎದುರಿನಲ್ಲಿರುವ ನಾಮಫಲಕದಲ್ಲೂ ಕನ್ನಡ ನಾಪತ್ತೆ ಆಗಿರುವ ಪ್ರಕರಣಗಳೂ ಇದ್ದು, ಅಂತಹ ಖಾಸಗಿ ಶಾಲೆಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ಡಿ.ನಾಗರಾಜ್, ಪಿ.ಆರ್.ನವೀನ್, ವಿಜಯ, ಎಂ.ಮಾಲತೇಶ, ಕೆ.ವೈ.ಮಂಜಿಲ್ ಅಹ್ಮದ್, ಶಂಕರನಾಯ್ಕ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-896423157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.