ಶಿಕಾರಿಪುರ: ರಂಜಾನ್ ಹಬ್ಬಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಭಾನುವಾರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

‘ರಂಜಾನ್ ಹಬ್ಬಕ್ಕೆ ಪ್ರತಿ ಕುಟುಂಬ ₹1,000 ದೇಣಿಗೆ ನೀಡಬೇಕು ಎಂದು ಮಸೀದಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅದಕ್ಕೆ ಮತ್ತೊಂದು ಗುಂಪು ವಿರೋಧ ವ್ಯಕ್ತಪಡಿಸಿತು. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿತ್ತು. ಬಳಿಕ ಕಲ್ಲು ತೂರಾಟ ಆರಂಭಗೊಂಡಿತು. ಶಿಕಾರಿಪುರ–ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಎರಡೂ ಗುಂಪುಗಳು ಕಲ್ಲು, ಕೋಲು ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಎಸೆಯುತ್ತಿದ್ದ ಕಾರಣ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು.

ಶಿಕಾರಿಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಕುರಿತು ಹತ್ತು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.