ಶಿಕಾರಿಪುರ: ‘ಆಧುನಿಕ ಜೀವನದ ಜಂಜಾಟದ ನಡುವೆ ಮನಸ್ಸಿಗೆ ನೆಮ್ಮದಿ, ಶಾಂತಿ ನೀಡುವ ತಾಣಗಳಾಗಿ ದೇವಸ್ಥಾನಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತಾಲ್ಲೂಕಿನ ಜಾವಗಟ್ಟೆ ಗ್ರಾಮದಲ್ಲಿ ಭಾನುವಾರ ನಡೆದ ಗಾಳಿ ದುರ್ಗಾದೇವಿ ನೂತನ ದೇವಸ್ಥಾನ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಆಧುನಿಕ ಕಾಲಘಟ್ಟದಲ್ಲಿ ಎಲ್ಲರೂ ಹೇಳುವವರೇ. ಆದರೆ ಕೇಳುವವರು ಯಾರೂ ಇಲ್ಲ. ದೇವಸ್ಥಾನದಲ್ಲಿ ಮಾತ್ರ ನಮ್ಮೆಲ್ಲ ಕಷ್ಟ ಸುಖ ಕೇಳಿಸಿಕೊಳ್ಳುವ ದೇವರಿದ್ದು, ಅವನೊಂದಿಗೆ ಹೇಳಿಕೊಂಡಾಗ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಿರುವುದು ಶ್ಲಾಘನೀಯ’ ಎಂದರು.

‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಯಿತು. ಈ ಭಾಗದ ನೂರಾರು ಕೆರೆಗಳಿಗೆ ನೀರು ಹರಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ರೈತರ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ನೀಡುವುದಕ್ಕಾಗಿ 220 ಕೆ.ವಿ. ವಿದ್ಯುತ್ ಕೇಂದ್ರ ನಿರ್ಮಿಸಲಾಯಿತು. ರೈಲ್ವೆ ಯೋಜನೆ ವಿಸ್ತರಣೆಯಿಂದ ಕೃಷಿ ಉತ್ಪನ್ನಕ್ಕೆ ಉತ್ತಮ ದರ ಸಿಗಲಿದೆ’ ಎಂದು ನುಡಿದರು.

‘ಯಡಿಯೂರಪ್ಪ ಸಿ.ಎಂ ಆಗಿದ್ದಾಗ ದೇಗುಲ ನಿರ್ಮಾಣಕ್ಕೆ ₹8 ಲಕ್ಷ ಅನುದಾನ ನೀಡಿದ್ದರು. ಭಕ್ತರ ಸಹಕಾರದೊಂದಿಗೆ ₹25 ಲಕ್ಷ ವೆಚ್ಚದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ’ ಎಂದು ಗಾಳಿ ದುರ್ಗಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಪ್ಪ ಯಾಬೇರ್ ಹೇಳಿದರು.

ತೊಗರ್ಸಿ ಹಿರೇಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಪಂಚವಣ್ಣಿಗೆ ಮಠದ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ಹಿರೇಮಾಗಡಿ ಸುಕ್ಷೇತ್ರದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ವಿರಕ್ತಮಠದ ಚನ್ನಬಸವ ಸ್ವಾಮೀಜಿ, ಶಿವಳ್ಳಿ ಹನುಮಂತಪ್ಪ ಗುರುಗಳು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ಈಶ್ವರಪ್ಪ, ಮುಖಂಡರಾದ ನಾಗರಾಜಗೌಡ, ಹನುಮಂತಪ್ಪ ತೊಗರ್ಸಿ, ಪಿ.ಸುನಿಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-42-1753093220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.