ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಎರಡು ವರ್ಷಗಳಲ್ಲಿ 2,400 ವಿಮಾನಯಾನ ಮತ್ತು 1 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರ ನಿರ್ವಹಣೆ ಯಶಸ್ವಿಯಾಗಿ ನಡೆದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಶಿವಮೊಗ್ಗೆ ವಿಮಾನ ನಿಲ್ದಾಣದ ಎರಡನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ಮಾತನಾಡಿದರು.

ಕೆಎಸ್ಐಐಡಿಸಿ ಮೂಲಕ ರಾಜ್ಯ ಸರ್ಕಾರವೇ ನಿರ್ವಹಿಸಲು ಆರಂಭಿಸಿದ ಪ್ರಪ್ರಥಮ ವಿಮಾನ ನಿಲ್ದಾಣ ಇದಾಗಿದೆ. ಕಳೆದ ಎರಡು ವರ್ಷಗಳಲ್ಲಿ ಇಲ್ಲಿ ಇಂಡಿಗೋ ಕಂಪನಿಯು 670 ಯಾನಗಳಿಂದ 31,500 ಪ್ರಯಾಣಿಕರಿಗೆ, ಸ್ಟಾರ್ ಏರ್ ಸಂಸ್ಥೆಯು 1,200 ಯಾನಗಳ ಮೂಲಕ 47 ಸಾವಿರ ಪ್ರಯಾಣಿಕರಿಗೆ ಮತ್ತು ಸ್ಪೈಸ್ ಜೆಟ್ ಸಂಸ್ಥೆಯು 530 ಯಾನಗಳ ಮೂಲಕ 25 ಸಾವಿರ ಪ್ರಯಾಣಿಕರಿಗೆ ವಿಮಾನಯಾನ ಸೇವೆ ಒದಗಿಸಿವೆ ಎಂದರು.

ಇಲ್ಲಿಯ ವೈಮಾನಿಕ ಸೇವೆಯ ಬೇಡಿಕೆಗಳನ್ನು ಪೂರೈಸಲು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಧುನಿಕ ಮಾದರಿಯ ಡಿಎಂಇ ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಿಂದ 24x7 ವಿಮಾನಸೇವೆ ಒದಗಿಸಬಹುದು. ಆರ್.ಸಿ.ಎಸ್-ಉಡಾನ್ ಯೋಜನೆಯಡಿ ಇಲ್ಲಿಂದ ದೇಶದ ಮತ್ತಷ್ಟು ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲಾಗುವುದು ಎಂದು ವಿವರಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವು 758 ಎಕರೆ ವಿಸ್ತಾರವಿದ್ದು, ಇದನ್ನು ₹576.76 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.