ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಮನೆಗೆ ತೆರಳಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

ಶಿವಮೊಗ್ಗದ ಗುಂಡಪ್ಪ ಶೆಡ್ ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.
Published 29 ನವೆಂಬರ್ 2023, 6:46 IST
Last Updated 29 ನವೆಂಬರ್ 2023, 6:46 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗದ ಗುಂಡಪ್ಪ ಶೆಡ್ ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.

ಈ ವೇಳೆ ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದರು. ಮನೆಗೆ ಬಂದ ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರನ್ನು ಶಾಲು ಹಾಕಿ ವಿಜಯೇಂದ್ರ ಸನ್ಮಾನ ಮಾಡಿದರು.

ವಿಜಯೇಂದ್ರ ಅವರನ್ನು ಅಭಿನಂದಿಸಿ ಈಶ್ವರಪ್ಪ ಸಿಹಿ ತಿನ್ನಿಸಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಕೂಡ ದೇವರ ಕೋಣೆಗೆ ಕರೆದೊಯ್ದು ವಿಜಯೇಂದ್ರ ಅವರಿಗೆ ಬಾಳೆಹಣ್ಣು ನೀಡಿದರು. ಈ ವೇಳೆ ಕಾರ್ಯಕರ್ತರು ಜಯ ಘೋಷ ಮಾಡಿದರು. ನಂತರ ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT