ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಸಾರಿಗೆ ಸಂಸ್ಥೆ ಬಸ್-ಒಮ್ನಿ ನಡುವೆ ಡಿಕ್ಕಿ; ಮೂವರು ಸಾವು

Published 11 ಏಪ್ರಿಲ್ 2024, 9:15 IST
Last Updated 11 ಏಪ್ರಿಲ್ 2024, 9:15 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೊರಟಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್‌ ಹಾಗೂ ಒಮ್ನಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಸಾವೀಗೀಡಾದವರು ಶಿಕಾರಿಪುರ ತಾಲ್ಲೂಕಿನ ಹರಮಘಟ್ಟದ ನಂಜುಂಡಪ್ಪ, ರಾಕೇಶ್ ಹಾಗೂ ದೇವರಾಜ್ ಎಂದು ತಿಳಿದುಬಂದಿದೆ. ಒಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ..

ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ-ಬಿದರಹಳ್ಳಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳ ದಾವಣಗೆರೆ ಜಿಲ್ಲೆ ವ್ಯಾಪ್ತಿಗೆ ಬರುತ್ತದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲವರಿಗೂ ಗಾಯವಾಗಿದೆ. ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಒಮ್ನಿ ವಾಹನ ನುಜ್ಜುಗಜ್ಜಾಗಿದೆ. ಬಸ್‌ ಒಮ್ನಿ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆಪಕ್ಕದ ತಡೆಗೋಡೆಗೆ ಗುದ್ದಿದೆ. ಇದರಿಂದ ಬಸ್‌ನ ಮುಂದಿನ ಚಕ್ರ ಕಳಚಿದ್ದು, ಮುಂಭಾಗ ಜಖಂಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT