ಭಾನುವಾರ, ಜುಲೈ 3, 2022
28 °C

ಶಿವಮೊಗ್ಗ | ಬಜರಂಗದಳ ಕಾರ್ಯಕರ್ತನ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾವು–ಪ್ರಾತಿನಿಧಿಕ ಚಿತ್ರ

ಶಿವಮೊಗ್ಗ: ಇಲ್ಲಿನ ಸೀಗೇಹಟ್ಟಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದೆ.

ಹರ್ಷ (24) ಮೃತ ಯುವಕ. ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿತ್ತು.


ಹರ್ಷ

ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಆತನಿಗೆ ಆಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮೃತನ ಸಾವಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದವು.

ನಗರದ ಎಲ್ಲೆಡೆ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಪೂರ್ವವಲಯ ವ್ಯಾಪ್ತಿಯ ಇತರೆ ಜಿಲ್ಲೆಗಳಿಂದ ರಾತ್ರಿಯೇ ಹೆಚ್ಚುವರಿ ಪೊಲೀಸ್ ಪಡೆ ಕರೆಸಲಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು