ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ ಆದೇಶದಂತೆ ಗ್ರ್ಯಾಚುಟಿ ಪಾವತಿಸಿ

ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Last Updated 2 ಡಿಸೆಂಬರ್ 2022, 5:32 IST
ಅಕ್ಷರ ಗಾತ್ರ

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಗ್ರ್ಯಾಚುಟಿ ಪಾವತಿ, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಂಗನವಾಡಿ ನೌಕರರು ಗ್ರ್ಯಾಚುಟಿ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅದರನ್ವಯ ರಾಜ್ಯದ ಸಾವಿರಾರು ನಿವೃತ್ತಿ ನೌಕರರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕೆಲವು ಕಡೆ ಅಧಿಕಾರಿಗಳು ಅರ್ಜಿ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಗ್ರ್ಯಾಚುಟಿಗೆ ಅರ್ಜಿ ಸಲ್ಲಿಸಿರುವವರಿಗೆ ನ್ಯಾಯ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರದ ವೇಳಾಪಟ್ಟಿ ಬದಲಾಗಬೇಕು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ತನಕ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಸಾರ್ವಜನಿಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ಮಾಡಲು ಅವಕಾಶವಿಲ್ಲ ಎಂಬುದನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ತಿಂಗಳು ಐದನೇ ತಾರೀಖಿನೊಳಗಾಗಿ ವೇತನ ಪಾವತಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸೇವೆ ಕಾಯಂ ಗೊಳಿಸಬೇಕು. ಕೆಲಸದಿಂದ ತೆಗೆದು ಹಾಕಿರುವ ಕಾರ್ಯಕರ್ತೆಯರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಜಿಲ್ಲಾ ಘಟಕದ ಅಧ್ಯಕ್ಷೆ ಶೈಲಜಾ, ತಾಲ್ಲೂಕು ಅಧ್ಯಕ್ಷೆ ಶ್ಯಾಮಲಾ, ತುಳುಸಿ ಪ್ರಭಾ, ಆರ್. ಮಂಜುಳ, ಎಚ್. ಜಯಲಕ್ಷ್ಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT