ಆರ್‌ಟಿಐ ಅರ್ಜಿ ಅನಗತ್ಯ ಕಿರುಕುಳ ಸಲ್ಲ:ಡಿಸಿ
ಆರ್‌ಟಿಐ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಇನ್ನಿಲ್ಲದಂತೆ ಕಾಡುವುದು ಬೇಡಿಕೆ ಸಲ್ಲಿಸುವುದು ಮಾಡುವುದನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ‘ಕೆಲಸದ ಸ್ಥಳದಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವುದು ಪತ್ರಿಕೆಗಳಲ್ಲಿ ಆಧಾರರಹಿತ ಆರೋಪ ಮಾಡುವುದಲ್ಲದೇ ಅಸಂವಿಧಾನಿಕ ಪದಗಳ ಬಳಕೆ ಮಾಡುತ್ತಿರುವುದನ್ನೂ ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು.