ಶುಕ್ರವಾರ, ಜುಲೈ 30, 2021
28 °C

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಸದಸ್ಯತ್ವ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ತನಿಖೆ ಪೂರ್ಣಗೊಳ್ಳುವವರೆಗೆ ಸಹಕಾರಿ ಕ್ಷೇತ್ರದ ಯಾವುದೇ ಸಹಕಾರ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದುವಂತಿಲ್ಲ ಎಂದು ಸಹಕಾರ ಇಲಾಖೆ ಜಂಟಿ ನಿಬಂಧಕ ಪಾಂಡುರಂಗ ಆದೇಶಿಸಿದ್ದಾರೆ.

2014ರಲ್ಲಿ ಡಿಸಿಸಿ ಬ್ಯಾಂಕ್ ಗಾಂಧಿಬಜಾರ್ ಶಾಖೆಯಲ್ಲಿ ನಡೆದ ಚಿನ್ನ ಅಡಮಾನ ಸಾಲದ ಹಗರಣ, ನಿಯಮ ಮೀರಿ ಜಿಲ್ಲೆಯ ಹೊರಗಿನ ಕೈಗಾರಿಕೆಗಳಿಗೆ ನೀಡಿರುವ ಸಾಲದ ತನಿಖೆಗೆ ಸಹಕಾರಿಯಾಗುವಂತೆ ಈ ಆದೇಶ ಹೊರಡಿಸಲಾಗಿದೆ.

ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆ: ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ರಾಜಣ್ಣ ರೆಡ್ಡಿ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಆ ಸ್ಥಾನಕ್ಕೆ ಸಹಕಾರ ಇಲಾಖೆ ಉಪನಿಬಂಧಕ ನಾಗೇಶ್ ಡೋಂಗ್ರೆ ಅವರನ್ನು ನೇಮಕಗೊಳಿಸಿದೆ.

‘ನಕಲಿ ಚಿನ್ನ ಅಡಮಾನವಿಟ್ಟು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿತ್ತು. ಹೊರ ಜಿಲ್ಲೆಗಳಿಗೆ ಸಾಲ ನೀಡಲಾಗಿದೆ. ಈ ಎಲ್ಲ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಬೇಕು. ಸರ್ಕಾರ ಮೊದಲ ಹೆಜ್ಜೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶ್ಲಾಘಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು