ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಜೆಎಂ ಯೋಜನೆ: ಶೀಘ್ರ ಪೂರ್ಣಗೊಳಿಸಿ

ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್
Last Updated 26 ಜುಲೈ 2022, 5:39 IST
ಅಕ್ಷರ ಗಾತ್ರ

ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಯೋಜನೆ, ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಸೂಚಿಸಿದರು.

ಇಲ್ಲಿನಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮತನಾಡಿದರು.

ಪ್ರತಿ ಮನೆಗೆ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಮೂಲಕಜಲಜೀವನ್ ಮಿಷನ್ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.ಎಲ್ಲಾ ಇಲಾಖೆಗಳು ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಅನುಷ್ಠಾನ ಆರಂಭಿಸಬೇಕು ಎಂದರು.

ಗ್ರಾಮೀಣ ವಸತಿ ಯೋಜನೆ ಅನುಷ್ಟಾನ ಚುರುಕುಗೊಳಿಸಬೇಕು. ಜಿಲ್ಲೆಯಲ್ಲಿ 2020ರಿಂದ ಇದುವರೆಗೆ 20,286 ಮನೆಗಳು ಮಂಜೂರಾ ಗಿದ್ದು, ಇವುಗಳ ಪೈಕಿ 11,324 ಮನೆಗಳು ಪ್ರಗತಿಯಲ್ಲಿವೆ. 8,962 ಮನೆಗಳ ನಿರ್ಮಾಣ ಕಾರ್ಯ ಇನ್ನೂ ಪ್ರಾರಂಭಿಸಿಲ್ಲ. ಅಂಬೇಡ್ಕರ್ ಆವಾಸ್ ಯೋಜನೆಯಡಿ 2011-12ನೇ ಸಾಲಿನಲ್ಲಿ 1,989 ಮನೆಗಳ ನಿರ್ಮಾಣ ಗುರಿ ನೀಡಲಾಗಿದ್ದು, 1,215 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಬಸವ ವಸತಿ ಯೋಜನೆಯಡಿ 6,451 ಮನೆಗಳ ಗುರಿ ನೀಡಲಾಗಿದ್ದು, 4,835 ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ 84 ಫಲಾನುಭವಿಗಳಲ್ಲಿ 24 ಫಲಾನುಭವಿಗಳ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದವರಿಗೆ ಶೀಘ್ರ ಸಂಪರ್ಕ ಕಲ್ಪಿಸಬೇಕು ಎಂದರು.

ಜಲಜೀವನ್ ಮಿಷನ್ ಪ್ರಥಮ ಹಂತದಲ್ಲಿ 666 ಜನವಸತಿಗಳಿಗೆ ನೀರು ಪೂರೈಸಲು, 626 ಕಾಮಗಾರಿಗಳಿಗೆ
₹ 148 ಕೋಟಿ ಮಂಜೂರಾಗಿದ್ದು, 591 ಕಾಮಗಾರಿ ಪೂರ್ಣಗೊಳಿಸಲಾಗಿದೆ. ಬಾಕಿ ಕಾಮಗಾರಿಗಳು ಅನುಷ್ಠಾನದ ಹಂತದಲ್ಲಿವೆ. ಯೋಜನೆಯ ಎರಡನೇ ಹಂತದಲ್ಲಿ 540 ಜನವಸತಿಗಳಿಗೆ ನೀರು ಒದಗಿಸಲು ₹ 136 ಕೋಟಿ ಮಂಜೂರಾಗಿದ್ದು, ಕಾರ್ಯಾದೇಶ ನೀಡಲಾಗಿರುವ 389 ಕಾಮಗಾರಿಗಳ ಪೈಕಿ 77 ಕಾಮಗಾರಿಗಳು ಪೂರ್ಣಗೊಂಡಿವೆ. 3 ಹಂತದಲ್ಲಿ 884 ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, 77 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ರಸಗೊಬ್ಬರ ಹಂಚಿಕೆ ಮಾಡಿ

ಜಿಲ್ಲೆಯಲ್ಲಿ ಬಿತ್ತನೆ ಕಾರ್ಯಗಳು ಆರಂಭವಾಗಿರುವ ಕಾರಣ ಎಲ್ಲಾ ತಾಲ್ಲೂಕುಗಳಲ್ಲಿ ರಸಗೊಬ್ಬರ ಸಮರ್ಪಕವಾಗಿ ಹಂಚಿಕೆಯಾಗುವಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅಗತ್ಯವಿರುವ ಕಡೆ ಹಂಚಿಕೆಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳ ಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT