ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ಶನಿವಾರ ಬೆಳಿಗ್ಗೆ ಜಿಲ್ಲೆಯ 25 ಕಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ಲೋಕಾಯುಕ್ತ ಪೊಲೀಸರ 15 ತಂಡಗಳು ದಾಳಿ ನಡೆಸಿದ್ದು ಪರಿಶೀಲನೆ ಮುಂದುವರೆದಿದೆ.

ಹೊಳೆಹೊನ್ನೂರಿನಲ್ಲಿ ತುಂಗಭದ್ರಾ ನದಿ, ಭದ್ರಾವತಿ ಭಾಗದಲ್ಲಿ ಭದ್ರಾ ನದಿ, ಶಿವಮೊಗ್ಗ , ತೀರ್ಥಹಳ್ಳಿ ತಾಲ್ಲೂಕಿನಲ್ಲಿ ತುಂಗಾ ನದಿ ಹಾಗೂ ಸಾಗರ, ಹೊಸನಗರ ತಾಲ್ಲೂಕುಗಳಲ್ಲಿ ಶರಾವತಿ ಹಿನ್ನೀರು ಪ್ರದೇಶದ ಅಕ್ರಮ ಮರಳುಗಾರಿಕೆ ಕ್ವಾರಿಗಳ ಮೇಲೆ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ 15 ಜೆಸಿಬಿ, 10 ಮರಳು ಫಿಲ್ಟರ್ ಉಪಕರಣ, 15 ಲಾರಿ ಹಾಗೂ 10 ಟ್ರ್ಯಾಕ್ಟರ್ ಗಳ ವಶಪಡಿಸಿಕೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಇಲ್ಲಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಕಚೇರಿಯ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ಹಾಗೂ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಕೆಡಿಪಿ ಸಭೆಯಲ್ಲಿ ಸದ್ದು: ಶಿವಮೊಗ್ಗದಲ್ಲಿ ಅಕ್ರಮವಾಗಿ ಮರಳು ಹಾಗೂ ಮಣ್ಣು ಕಬಳಿಕೆ ಹಾಗೂ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ 'ಪ್ರಜಾವಾಣಿ' ವಿಶೇಷ ವರದಿ ಪ್ರಕಟಿಸಿತ್ತು. ಕಳೆದ ವಾರ ಕೆಡಿಪಿ ಸಭೆಯಲ್ಲೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಅಕ್ರಮ ಮರಳುಗಾರಿಕೆ ಬಗ್ಗೆ ಪ್ರಸ್ತಾಪಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಪಿ.ಕೆ.ನಾಯ್ಕ ವಿರುದ್ಧ ಹರಿಹಾಯ್ದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.