ಭಾನುವಾರ, ಸೆಪ್ಟೆಂಬರ್ 20, 2020
22 °C

ಶಿವಮೊಗ್ಗ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬೈಪಾಸ್ ರಸ್ತೆಯ ಹೊಸ ಸೇತುವೆ ಬಳಿ ಶುಕ್ರವಾರ ತುಂಗಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಹುರಳಿಹಳ್ಳಿ ಗ್ರಾಮದ ಸಂತೋಷ್‌ (25), ಕಾಕನ ಹಸೂಡಿಯ ಅನುಷಾ (20) ಆತ್ಮಹತ್ಯೆ ಮಾಡಿಕೊಂಡವರು.

ಮಧ್ಯಾಹ್ನ 3ರ ಸಮಯದಲ್ಲಿ ಇಬ್ಬರೂ ಚಪ್ಪಲಿ ಬಿಟ್ಟು, ಅಲ್ಲಿ ಗುಲಾಬಿ ಹೂವಿಟ್ಟಿದ್ದಾರೆ. ನಂತರ ಕೈಗೆ ವೇಲು ಸುತ್ತಿಕೊಂಡು ನದಿಗೆ ಹಾರಿದ್ದಾರೆ. ಸ್ಥಳೀಯರು ಯುವತಿಯನ್ನು ರಕ್ಷಿಸಿ, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಅಗ್ನಿ ಶಾಮಕ ಸೇವೆಯ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದರು.

ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು