ಶಿವಮೊಗ್ಗ: ನಗರದಲ್ಲಿ ಹತ್ಯೆಯಾದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಹಲವೆಡೆ ಕಲ್ಲು ತೂರಾಟನಡೆದು, ಗುಂಪು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ, ಲಾಠಿ ಬೀಸಿದರು.

ಸೀಗೆಹಟ್ಟಿಯಿಂದ ಹೊರಟ ಮೆರವಣಿಗೆ ಸಿದ್ದಯ್ಯ ರಸ್ತೆಗೆ ಬರುತ್ತಿದ್ದಂತೆ ಬೇರೆ ಬೀದಿಗಳಿಂದ ಕಲ್ಲುಗಳು ತೂರಿಬಂದವು. ಪ್ರತಿಯಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರೂ ಕಲ್ಲು ತೂರಿದರು. ಟಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ಬಜಾರ್ ಮಸೀದಿ ಬಳಿ ಬಂದಾಗ ಉದ್ರಿಕ್ತ ಗುಂಪು ಮಸೀದಿಗಳ ಮೇಲೆ ಕಲ್ಲು ತೂರಾಟ ನಡೆಸಿತು. ಕ್ಷಣ ಮಾತ್ರದಲ್ಲಿ ಹಲವು ಬೀದಿಗಳು ರಣರಂಗದಂತೆ ಭಾಸವಾದವು. ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು.

ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತಹರ್ಷ ಕೊಲೆ: ನಳಿನ್ ಕುಮಾರ್ ಖಂಡನೆ

ಶಿವಮೊಗ್ಗ ನಾಯಕ ವೃತ್ತದಿಂದ ಪಿ.ಬಿ.ರಸ್ತೆ ತಲುಪಿದಾಗ ಮತ್ತೆ ಕಲ್ಲು ತೂರಾಟ ನಡೆಯಿತು. ದಾರಿಯ ಉದ್ದಕ್ಕೂ ಜೈಶ್ರೀರಾಮ್ ಘೋಷಣೆ ಮೊಳಗಿದವು. ಮೆರವಣಿಗೆ ರೋಟರಿ ಚಿತಾಗಾರದತ್ತ ಸಾಗಿತು. ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಶಿವಮೊಗ್ಗ: ಮೃತ ಹರ್ಷನ ವಿರುದ್ಧ ದಾಖಲಾಗಿದ್ದವು ನಾಲ್ಕು ಪ್ರಕರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.