ಗುರುವಾರ , ಜುಲೈ 29, 2021
21 °C

ನಿರಂತರ ಮಳೆ; ಜನ ಜೀವನ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನಗರಪಾಲಿಕೆ ವ್ಯಾಪ್ತಿಯ ಹಲವು ಬಡಾವಣೆಗಳ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮಹಾನಗರ ಪಾಲಿಕೆ ಎದುರಿನ ರಸ್ತೆ ಸೇರಿದಂತೆ ಹಲವೆಡೆ ಮಳೆ ನೀರು ಚರಂಡಿ ಮೂಲಕ ಹರಿದು ಹೋಗಲು ಸಾಧ್ಯವಾಗದೆ ರಸ್ತೆಗಳಲ್ಲೇ ನೀರು ಹಳ್ಳದಂತೆ ಹರಿಯುತ್ತಿತ್ತು. ರಾಜಾಕಾಲುವೆಗಳಲ್ಲೂ ನೀರು ಸರಾಗವಾಗಿ ಹರಿದೇ ಸಮಸ್ಯೆ ಎದುರಾಗಿತ್ತು.

ಸ್ಮಾರ್ಟ್‌ಸಿಟಿ ಕಾಮಗಾರಿಗೆ ಹಲವೆಡೆ ಗುಮಡಿ ಅಗೆದು ಬಿಟ್ಟಿರುವ ಪರಿಣಾಮ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಗಳಾಗುತ್ತಿವೆ. ಗೋಪಾಳ ನಗರ, ಗುತ್ಯಪ್ಪ ಕಾಲೊನಿ ಬಳಿ ಗುರುವಾರ ಅಂಗವಿಕಲರ ತ್ರಿಚಕ್ರ ವಾಹನ ಬಿದ್ದು ಗಾಯಗೊಂಡಿದ್ದಾರೆ. ನಿತ್ಯವೂ ಹಲವು ಬಡಾವಣೆಗಳಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿವೆ.

ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ ಅವರು ಪಾಲಿಕೆ ಸದಸ್ಯರು, ಅಧಿಕಾರಿಗಳ ಜತೆ ಹಲವು ಬಡಾವಣೆಗಳಿಗೆ ಭೇಟಿ ನೀಡಿ ರಾಜಾಕಾಲುವೆಗಳ ಸ್ಥಿತಿಗತಿ ಪರಿಶೀಲಿಸಿದರು. ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು