ಶುಕ್ರವಾರ, ಮೇ 14, 2021
25 °C

ಶಿವಮೊಗ್ಗ: ಸಾಗರ ನಗರ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾಗರ ನಗರ ಠಾಣೆ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ವಿರುದ್ಧ ಭದ್ರಾವತಿಯ ಮಹಿಳೆಯೊಬ್ಬರು ಇಲ್ಲಿನ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಅಶೋಕ್ ಕುಮಾರ್ ನಾಲ್ಕು ವರ್ಷಗಳಿಂದ ನಿರಂತರವಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಪರಿಚಯವಾಗಿತ್ತು. ಒಂದು‌ ದಿನ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ಎಸಗಿದ್ದರು. ನಂತರ ಅಶ್ಲೀಲ ಫೋಟೊ, ವೀಡಿಯೊ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಬಳಸಿಕೊಂಡಿದ್ದಾರೆ. ಅಲ್ಲದೇ ನನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಎಸಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು‌ ದೂರಿನಲ್ಲಿ ವಿವರಿಸಿದ್ದಾರೆ.

ಮಹಿಳೆ ದೂರು‌ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು