ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ–ಸಿಂಹಧಾಮದಲ್ಲಿ ಮಾರ್ಚ್ 19ರಂದು ನೀರಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಪಶು ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಶುಕ್ರವಾರ ಗೋಪಿ ವೃತ್ತದಲ್ಲಿ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪಶು ವೈದ್ಯಕೀಯ ಪರಿಷತ್ತು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸಮೀಕ್ಷಾ ರೆಡ್ಡಿ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಕೆಲಸದ ಸ್ಥಳದಲ್ಲಿ ಪಶು ವೈದ್ಯರಿಗೆ ಯಾವುದೇ ರಕ್ಷಣೆ ಇಲ್ಲದಿರುವುದಕ್ಕೆ ಇದು ನಿದರ್ಶನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೇಣದ ಬತ್ತಿ ಹಚ್ಚಿ ಸಮೀಕ್ಷಾ ರೆಡ್ಡಿ ಆತ್ಮಕ್ಕೆ ಶಾಂತಿಕೋರಿದರು.

ಮೃಗಾಲಯದಲ್ಲಿ ಸಾಮಾನ್ಯವಾಗಿ ಅಲ್ಲಿನ ಸಿಬ್ಬಂದಿ, ವೀಕ್ಷಕರು ಹಾಗೂ ಪ್ರಾಣಿಗಳ ಹಿತರಕ್ಷಣೆಗೆ ಅಗತ್ಯವಿರುವ ನಿಯಮಾವಳಿಗಳ ಪಾಲನೆ (ಎಸ್ಒಪಿ) ಮಾಡಲಾಗುತ್ತದೆ. ಆದರೆ ಸಮೀಕ್ಷಾ ರೆಡ್ಡಿ ವಿಚಾರದಲ್ಲಿ ಅದ್ಯಾವುದೂ ಆಗಿಲ್ಲ. ನೀರಾನೆಯ ನೆಲೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಆಗಿದ್ದರೂ ಅದರಲ್ಲಿನ ದೃಶ್ಯಾವಳಿಗಳು ಲಭ್ಯವಿಲ್ಲ ಎಂಬ ಮಾಹಿತಿ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಡಾ.ಮೆರಿನ್ ಹೆಸರಲ್ಲಿ ಪತ್ರ?..

ಈ ಮಧ್ಯೆ ಸಮೀಕ್ಷಾ ಜೊತೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ತರಬೇತಿ ವೈದ್ಯೆ ಡಾ.ಮೆರಿನ್ ನೀಲ್ ಬೆಂಗಳೂರಿನ ಪೋಷಕರ ಬಳಿಗೆ ವಾಪಸ್ ಮರಳಿದ್ದಾರೆ. ಡಾ.ಮೆರಿನ್ ಹೆಸರಿನಲ್ಲಿ ಕರ್ನಾಟಕ ಪಶುವೈದ್ಯರ ಸಂಘಕ್ಕೆ ಬರೆದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಮೃಗಾಲಯದ ಕೆಲಸ ಸ್ಥಳದಲ್ಲಿ ಸರಿಯಾದ ರಕ್ಷಣೆ ಇಲ್ಲ. ಎಸ್ಒಪಿ ಪಾಲನೆ ಆಗುತ್ತಿಲ್ಲ ಎಂಬ ಸಂಗತಿಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲಿ ಪ್ರೊಟೊಕಾಲ್ ಉಲ್ಲಂಘನೆ ಆಗುತ್ತಿದ್ದು ಮೃಗಾಲಯದ ಆಡಳಿತ ಬದಲಾವಣೆ ಆಗದೇ ಅಲ್ಲಿಗೆ ತಾವು ಮರಳುವುದಿಲ್ಲ ಎಂದು ಹೇಳಿದ್ದಾರೆ. ಡಾ.ಸಮೀಕ್ಷಾ ರೆಡ್ಡಿ ಜೊತೆಗಿನ ಒಡನಾಟವನ್ನು ಹಂಚಿಕೊಂಡಿರುವ ಅವರು ಮೃಗಾಲಯದಲ್ಲಿ ಕೆಲಸ ವೇಳೆ ತಾವು ಅನುಭವಿಸಿದ ತೊಂದರೆಗಳನ್ನು ಉಲ್ಲೇಖಿಸಿದ್ದಾರೆ. ಮಾಸಿಕ ಋತುಸ್ರಾವದ ರಜೆಯ ವೇಳೆಯೂ ಮೇಲಧಿಕಾರಿಗಳು ಕರೆದು ಕೆಲಸ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.