ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ‘ಪ್ರಾಮಾಣಿಕರ ಆಯ್ಕೆ ಸಂತಸ ತಂದಿದೆ’

Last Updated 23 ಜನವರಿ 2022, 7:38 IST
ಅಕ್ಷರ ಗಾತ್ರ

ಶಿರಾಳಕೊಪ್ಪ:ಪಟ್ಟಣದ ನಾಗರಿಕರಸೇವೆಗೆ ಐದು ಜನ ಪ್ರಾಮಾಣಿಕ ವ್ಯಕ್ತಿಗಳನ್ನು ಪುರಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಜನಸಾಮಾನ್ಯರ ಬಳಿಗೆ ಸರ್ಕಾರದ ಸೇವೆಯನ್ನು ಒದಗಿಸುತ್ತಿರುವುದು ಹರ್ಷ ತಂದಿದೆ ಎಂದು ಕೆಎಸ್‌ಡಿಎಲ್ ನಿರ್ದೇಶಕಿ ಕೆ. ನಿವೇದಿತಾ ರಾಜು ಹೇಳಿದರು.

ಪಟ್ಟಣದ ಹೊಂಡದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಮಹಿಳಾ ಘಟಕದ ಆಶ್ರಯದಲ್ಲಿ ಪುರಸಭೆಗೆ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುರಸಭೆಯ ಮಾಜಿ ಅಧ್ಯಕ್ಷ ಎ.ಸಿ. ಚನ್ನವೀರಪ್ಪ ಮಾತನಾಡಿ, ‘ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಲಭಿಸಿರುವುದು ಪಕ್ಷದ ಕಾರ್ಯಕರ್ತರಿಗೆ ನವಚೈತನ್ಯ ತಂದಿದೆ’ ಎಂದರು.

ನೂತನ ನಾಮನಿರ್ದೇಶಿತ ಸದಸ್ಯರಾದ ಮಂಚಿ ಶಿವಾನಂದ, ತಡಗಣಿ ಮಂಜಣ್ಣ, ದಿವಾಕರ ಶಾನಭೋಗ್, ಇಂದೂಧರ ದುರ್ಗದ, ಪವನ ಕಲಾಲ್ ಅವರನ್ನು ಸನ್ಮಾನಿಸಲಾಯಿತು.

ಪುರಸಭೆ ಅಧ್ಯಕ್ಷ ಮಂಜುಳಾ ರಾಜು, ಉಪಾಧ್ಯಕ್ಷೆ ರಾಜೇಶ್ವರಿ ವಸಂತ, ಸದಸ್ಯರಾದ ರಾಜು, ಮಹಾಬಲೇಶ್ವರ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಸವಿತಾ ಶಿವಕುಮಾರ್, ಪುರಸಭೆ ಮಾಜಿ ಅಧ್ಯಕ್ಷ‌ ಆರ್.ಲೋಕೇಶ್, ಎಚ್.ಎಂ. ಚಂದ್ರಶೇಖರ್, ಮನೋಹರ, ಕೇದಾರೇಶ್ವರ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಿನ್ಮಯಿ, ಜಾಹ್ನವಿ ಸೇರಿ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT