ಶಿರಾಳಕೊಪ್ಪ (ಶಿಕಾರಿಪುರ): ಪಟ್ಟಣ ಠಾಣೆ ಪೊಲೀಸರು ಗೋ ಮಾಂಸ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶುಕ್ರವಾರ ಇಬ್ಬರನ್ನು ಬಂಧಿಸಿ, ಇತರೆ 6 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪಟ್ಟಣದ ಹಳ್ಳೂರು ಕೇರಿ ಸರ್ಕಲ್ ಬಳಿಯ ಗೋಮಾಂಸ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಸಬ್ಇನ್ಸ್ಪೆಕ್ಟರ್ ಸೇರಿ ಮೂರು ಪೊಲೀಸರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಮೂವರು ಪೊಲೀಸರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ದಾಳಿಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿ ಸಂತೋಷ್ ದೂರಿನ ಮೇರೆಗೆ ಮಕ್ಬುಲ್ಸಾಬ್, ಹಬೀಬ್ ಎಂಬುವರನ್ನು ಬಂಧಿಸಲಾಗಿದೆ. ಸಲೀಮುಲ್ಲಾಖಾನ್, ಮನ್ಸೂರ್ಖಾನ್, ಫಾರೂಕ್, ಆಸೀಫ್, ಜೋಹರ್ಅಲಿ, ಬಿಲಾಲ್ಶೇಕ್, ಇರ್ಫಾನ್ ಇತರರ ಮೇಲೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.