ಶುಕ್ರವಾರ, ಜುಲೈ 1, 2022
27 °C
ಆರ್.ಎಂ. ಮಂಜುನಾಥ ಗೌಡ ಮೇಲ್ಮನವಿಗೆ ಪುರಸ್ಕಾರ

ಶಿವಮೊಗ್ಗ ಟಿಎಪಿಸಿಎಂಎಸ್‌ ಸಾಮಾನ್ಯ ಕ್ಷೇತ್ರದ ಚುನಾವಣೆಗೆ ಹೈಕೋರ್ಟ್‌ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ಶಿವಮೊಗ್ಗ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್‌)ಕ್ಕೆ ಶುಕ್ರವಾರ ನಡೆಯಬೇಕಿದ್ದ ಸಾಮಾನ್ಯ ಕ್ಷೇತ್ರದ ನಿರ್ದೇಶಕ ಸ್ಥಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಟಿಎಪಿಸಿಎಂಎಸ್ ನಿರ್ದೇಶಕ ಸ್ಥಾನದ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಈಚೆಗೆ ನಾಮಪತ್ರ ಸಲ್ಲಿಸಿದ್ದರು. ಅದನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಮಂಜುನಾಥ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.

ಹೈಕೋರ್ಟ್‌ ದ್ವಿ ಸದಸ್ಯ ವಿಭಾಗೀಯ ಪೀಠ ಗುರುವಾರ ಅರ್ಜಿಯನ್ನು ಪುರಸ್ಕರಿಸಿದೆ. ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಚುನಾವಣಾಧಿಕಾರಿಗೆ ದಂಡ ವಿಧಿಸಿ ತೀರ್ಪು ನೀಡಿದೆ. ಸಾಮಾನ್ಯ ಕ್ಷೇತ್ರದ ಚುನಾವಣೆಗೆ ತಡೆ ನೀಡಿದೆ.

‘ಕಾನೂನುಬಾಹಿರವಾಗಿ ನನ್ನ ನಾಮಪತ್ರ ಅನರ್ಹಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಹೋಗಿದ್ದೆ. ತೀರ್ಪು ಸಂತಸ ನೀಡಿದೆ. ಮುಂದಿನ ಚುನಾವಣೆ ನ್ಯಾಯಯುತವಾಗಿ ನಡೆಯಲಿ’ ಎಂದು ಮಂಜುನಾಥ ಗೌಡ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು