ಶಿವಮೊಗ್ಗ: ‘ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಎಲ್–ನಿನೋ ಕಾರಣದಿಂದ ಮಳೆಯ ಪ್ರಮಾಣ ವಾಡಿಕೆಗಿಂತ ಶೇ 10ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಹವಾಮಾನ ವರದಿಗಳ ಗಮನಿಸಿ ಬಿತ್ತನೆ ಹಾಗೂ ಇತರೆ ಕೃಷಿ ಚಟುವಟಿಕೆ ಕೈಗೊಳ್ಳಬೇಕು’ ಎಂದು ಕೃಷಿ ಇಲಾಖೆ ಮನವಿ ಮಾಡಿದೆ.

‘ಜಿಲ್ಲೆಯಲ್ಲಿ ಭತ್ತ, ಮುಸುಕಿನ ಜೋಳ ಹಾಗೂ ಅಲ್ಪ ಪ್ರಮಾಣದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಬೀಜಗಳನ್ನು ಬಿತ್ತುವ ಮುನ್ನ ಬೆಳೆಗೆ ಅನುಗುಣವಾಗಿ ಸಾಕಷ್ಟು ತೇವಾಂಶ ಇರುವುದನ್ನು ಖಾತರಿ ಪಡಿಸಿಕೊಂಡು ಬಿತ್ತನೆ ಮಾಡಬೇಕು’ ಎಂದು ತಿಳಿಸಿದೆ.

‘ರೈತರು ಬೆಳೆಗಳಿಗೆ ಅತಿಯಾದ ರಾಸಾಯನಿಕ ಗೊಬ್ಬರ ಬಳಸುತ್ತಿದ್ದು, ಸಾಮಾನ್ಯವಾಗಿ ಸಾರಜನಕ (ಯೂರಿಯಾ) ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆ ಹೆಚ್ಚಾಗಿ ಮಾಡುತ್ತಿದ್ದಾರೆ. ಇದರಲ್ಲಿ ಪೊಟ್ಯಾಷ್ ಅಂಶವಿರುವುದಿಲ್ಲ. ಪೊಟ್ಯಾಷ್ ಪೋಷಕಾಂಶವು ಬೆಳೆಗಳಿಗೆ ರೋಗ ಹಾಗೂ ಕೀಟ ಬಾಧೆ ತಡೆದುಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಜೊತೆಗೆ ಕಾಳುಗಳನ್ನು ಸದೃಢಗೊಳಿಸಿ ಹೆಚ್ಚು ತೂಕ ಬರುವಂತೆ ಮಾಡುತ್ತದೆ. ಇದರಿಂದ ಇಳುವರಿ ಹೆಚ್ಚಾಗುತ್ತದೆ. ಹೀಗಾಗಿ ರೈತರು ಬಿತ್ತನೆ ಸಮಯದಲ್ಲಿ ಸಾರಜನಕ, ರಂಜಕ ಹಾಗೂ ಪೊಟ್ಯಾಷ್ ಪೋಷಕಾಂಶಗಳನ್ನು ಹೊಂದಿರುವ ಕಾಂಪ್ಲೆಕ್ಸ್ ರಸಗೊಬ್ಬರ ಬಳಸಬೇಕು’ ಎಂದು ಸಲಹೆ ನೀಡಿದೆ.

ಅಧಿಕೃತ ಮಾರಾಟಗಾರರಿಂದ ಬಿಲ್ ಪಡೆದು ಕೃಷಿ ಪರಿಕರ ಖರೀದಿಸಲು ಜಂಟಿ ಕೃಷಿ ನಿರ್ದೇಶಕ ಕಿರಣ್ಕುಮಾರ್ ಮನವಿ ಮಾಡಿದ್ದು, ನಕಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ದೂರು ಸಲ್ಲಿಸುವಂತೆ, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-42-1896883482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.