ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ, ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ರೈತರ ಅನೇಕ ಸಮಸ್ಯೆಗಳ ಪರಿಹರಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಸಭೆ ನಡೆಸಿದರು.

ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕಾನೂನಿನಲ್ಲಿ ತಿದ್ದುಪಡಿ ತರುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಮಧು ಬಂಗಾರಪ್ಪ ಮನವಿ ಮಾಡಿದರು.

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, 15 ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಬಗರ್ ಹುಕುಂ ಹಾಗೂ ಶರಾವತಿ ರೈತ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ‘ಶಿವಮೊಗ್ಗ ಜಿಲ್ಲೆಯಲ್ಲಿ ಮುಳುಗಡೆ ಸಂತ್ರಸ್ತರದ್ದು ಐದು ದಶಕಗಳ ಸಮಸ್ಯೆ. ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ನೀಡಿದ್ದ ಭರವಸೆಯಂತೆ ಶರಾವತಿ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ನಿವಾರಣೆ ನಮ್ಮ ಕರ್ತವ್ಯ ಎಂದರು.

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸುಪ್ರೀಂಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಸಂತ್ರಸ್ತರಲ್ಲಿ ಯಾರನ್ನು ತೆರವುಗೊಳಿಸದಂತೆ ಶಿವಮೊಗ್ಗದಲ್ಲಿ ಈಚೆಗೆ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಈ ವೇಳೆ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಸಂತ್ರಸ್ತರ ಹೋರಾಟ ಸಮಿತಿ ಮುಖಂಡರಾದ ಬಿ.ಎ. ರಮೇಶ್ ಹೆಗ್ಡೆ, ಜಿ.ಡಿ. ಮಂಜುನಾಥ್, ನಗರದ ಮಹದೇವಪ್ಪ, ಎಂ.ಪಿ.ಧರ್ಮರಾಜ್, ಗಣಪತಿ, ಹುಲ್ತಿಕೊಪ್ಪ ಶ್ರೀನಿವಾಸ್, ಸಿಗಂದೂರು ರವಿ, ಕೆರೆಹಳ್ಳಿ ರಾಮಪ್ಪ, ಶ್ರೀನಿವಾಸ ಕರಿಯಣ್ಣ ಸಂತೆಕಡೂರು ವಿಜಯಕುಮಾರ್, ಶಾಂತವೀರ ನಾಯಕ್ ರಾಘವೇಂದ್ರ, ರಾಜಪ್ಪ, ಕಟ್ಟಿಗೆಹಳ್ಳಿ ರಘುಪತಿ ಹಾಗೂ ಜಿಲ್ಲೆಯ ಅರಣ್ಯ ಹಕ್ಕು ಹೋರಾಟಗಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.